ಮುನಿರತ್ನ 
ರಾಜ್ಯ

ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಆರೋಪ: ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲು

ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ತೋಟಗಾರಿಕೆ ಸಚಿವ ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ತೋಟಗಾರಿಕೆ ಸಚಿವ ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಗೆಜೆಟೆಡ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ಜನರು ನಡುವೆ ದ್ವೇಷವನ್ನು ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಮಾರ್ಚ್ 31 ರಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ  “ಕ್ರೈಸ್ತರು ಈ ಕ್ಷಣದಲ್ಲಿಯೂ ಜನರನ್ನು ಮತಾಂತರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. 

ಕೊಳೆಗೇರಿಗಳಲ್ಲಿ ಮತಾಂತರ ಗರಿಷ್ಠವಾಗಿದೆ.  1,400 ಜನರಿರುವ ಇಂತಹ  ಸ್ಥಳಗಳಲ್ಲಿ 400 ಮಂದಿ ಮತಾಂತರಗೊಂಡಿದ್ದಾರೆ. ಕ್ರಿಶ್ಚಿಯನ್ನರು ಮತಾಂತರ ಮಾಡಲು ಬಂದರೆ ಅವರನ್ನು ಹೊರಹಾಕಿ ಇಲ್ಲವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಂದು ಮುನಿರತ್ನ ಹೇಳಿದ್ದರು.

ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 117 (ಅಪರಾಧಕ್ಕೆ ಪ್ರಚೋದನೆ), 153A (ವಿವಿಧ ಗುಂಪುಗಳು ಅಥವಾ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ (ಚುನಾವಣೆಗೆ ಸಂಬಂಧಿಸಿದಂತೆ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು)ಅಡಿಯಲ್ಲಿ ರಾಜರಾಜೇಶ್ವರಿನಗರ ಪೊಲೀಸರು ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT