ಧ್ರುವ ನಾರಾಯಣ್ ಪತ್ನಿ ವೀಣಾ 
ರಾಜ್ಯ

ಹಿರಿಯ ಕಾಂಗ್ರೆಸ್ ನಾಯಕ ದಿ. ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ

ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ.

ಮೈಸೂರು: ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ.

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ.

ದರ್ಶನ್ ಸೇರಿದಂತೆ ಇಬ್ಬರು ಪುತ್ರರಿದ್ದಾರೆ. ವಿಜಯನಗರದ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ಸಂಜೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಾ. 11ರಂದು ಧ್ರುವನಾರಾಯಣ್ ಅವರು ನಿಧನರಾಗಿದ್ದರು. ಅಂದು ಬೆಳಗಿನ ಜಾವದಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಆಗ ಮೈಸೂರಿನ ತಮ್ಮ ನಿವಾಸದಲ್ಲಿದ್ದ ಅವರು, ಆಸ್ಪತ್ರೆಗೆ ಹೋಗುವಷ್ಟರಲ್ಲಿ ನಿಧನರಾಗಿದ್ದರು.

ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. ಇವರು 2 ಬಾರಿ ಶಾಸಕರಾಗಿ 1 ಬಾರಿ ಸಂಸದರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

SCROLL FOR NEXT