ಹೆಚ್.ಡಿ.ಕುಮಾರಸ್ವಾಮಿ 
ರಾಜ್ಯ

ವೈಎಸ್ ವಿ ದತ್ತ ಇಂಟರ್ನ್ಯಾಷನಲ್ ಪಕ್ಷದ ಜೊತೆ ಹೋಗಿದ್ದಾರೆ, ನಮ್ಮ ಸಣ್ಣ ಪಕ್ಷದಲ್ಲಿ ಅವರಿಗೆಲ್ಲಿದೆ ಜಾಗ?: ಹೆಚ್'ಡಿ. ಕುಮಾರಸ್ವಾಮಿ

ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ‌ಯಿಲ್ಲ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ಚಿಕ್ಕಮಗಳೂರು: ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ‌ಯಿಲ್ಲ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಗಳಿಲ್ಲ. ಈ ಬಾರಿಯ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು. ಈಗಾಗಲೇ ಟಿಕೆಟ್‌ ಘೋಷಿಸಿರುವ  ಅಭ್ಯರ್ಥಿ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿಲ್ಲದಿದ್ದರೆ ಕರೆಸಿ ಮಾತುಕತೆ ನಡೆಸುತ್ತೇವೆ. ಬದಲಾವಣೆ ಮಾಡಬೇಕಾದ ಸ್ಥಿತಿ ಇದ್ದರೆ ಮಾಡುತ್ತೇವೆ’ ಎಂದು ಹೇಳಿದರು.

ಬಳಿಕ ವೈ.ಎಸ್.ವಿ. ದತ್ತ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವೈ.ಎಸ್.ವಿ. ದತ್ತ ಯಾರೆಂದು ನನಗೆ ಗೊತ್ತಿಲ್ಲ. ಅವರು ತುಂಬಾ ದೊಡ್ಡವರು ಅವರ ಬಗ್ಗೆ ನನಗೆ ಗೊತ್ತಿಲ್ಲ. ಅವರ ಬಗ್ಗೆ ನಾನೇಕೆ ಚರ್ಚೆ ಮಾಡಲಿ. ನನ್ನದು ಸಣ್ಣ ಪಕ್ಷ. ನನ್ನ ಪಕ್ಷಕ್ಕೆ ಅವರೇಕೆ ಬರುತ್ತಾರೆ? ಅವರು ಇಂಟರ್ ನ್ಯಾಷನಲ್ ಪಕ್ಷ ಸೇರಲು ಹೊರಟಿರುವವರು, ನನ್ನ ಪಕ್ಷದಲ್ಲಿ ಪಾಪ ಅವರಿಗೇನು ಸಿಗುತ್ತದೆ. ಅವರು ದೊಡ್ಡ ಪಕ್ಷದಲ್ಲೇ ಇರಲಿ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ