ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಹಾಸನ: 85 ವರ್ಷದ ವೃದ್ಧೆ ಮೇಲೆ ಮಾನಸಿಕ ಅಸ್ವಸ್ಥನಿಂದ ಅತ್ಯಾಚಾರ, ಕೊಲೆ

85 ವರ್ಷದ ವೃದ್ಧೆ ಮೇಲೆ 30 ವರ್ಷದ ಯುವಕನೊಬ್ಬ ಅತ್ಯಾಚಾರವೆಸಗಿರುವ ದಾರುಣ ಘಟನೆ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಈ ಘಟನೆ ಇತ್ತೀಚೆಗೆ ನಡೆದಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
Nagaraja AB
Updated On : 7 Apr 2023, 8:43 am

ಹಾಸನ: 85 ವರ್ಷದ ವೃದ್ಧೆ ಮೇಲೆ 30 ವರ್ಷದ  ಯುವಕನೊಬ್ಬ ಅತ್ಯಾಚಾರವೆಸಗಿರುವ ದಾರುಣ ಘಟನೆ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಈ ಘಟನೆ ಇತ್ತೀಚೆಗೆ ನಡೆದಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.

ಆರೋಪಿ ಮಿಥುನ್ ಕುಮಾರ್ ಮತ್ತು ಆತನ ತಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಮಾಡಾಳು ಗ್ರಾಮದ ಸಂತ್ರಸ್ತೆ, ದಾರಿ ತಪ್ಪಿ ನಡೆಯುತ್ತಿರುವುದನ್ನು ಗಮನಿಸಿದ್ದಾರೆ. ಆಗ ಆಕೆಯನ್ನು ತನ್ನ ಮೊಬೈಕ್ ನಲ್ಲಿ ಮನೆಗೆ ಡ್ರಾಪ್ ಮಾಡುವಂತೆ ಆರೋಪಿ ತಾಯಿ ಆತನಿಗೆ ಹೇಳಿದ್ದಾರೆ.

ಸಂತ್ರಸ್ತೆಯನ್ನು ತನ್ನ ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡ ಮಿಥುನ್, ಸಮೀಪದ ಹೊಲಕ್ಕೆ ಕರೆದೊಯ್ದುಆಕೆಗೆ ಕಿರುಕುಳ ನೀಡಲು ಯತ್ನಿಸಿದ್ದಾನೆ. ಆಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಆಕೆಯ ಹಣೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ.  ನಂತರ ಸಂತ್ರಸ್ತೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.

Advertisement

Advertisement

ಮಿಥುನ್ ಕೆಲವು ವರ್ಷಗಳ ಹಿಂದೆ ವಯಸ್ಸಾದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಸಿಕ್ಕಿಬಿದ್ದಿದ್ದಎಂದು ಗ್ರಾಮಸ್ಥರೊಬ್ಬರು ಹೇಳಿದ್ದಾರೆ. ಆದರೆ ಗ್ರಾಮಸ್ಥರು ಎಚ್ಚರಿಕೆ ನೀಡಿ ಸಮಸ್ಯೆ ಬಗೆಹರಿಸಿದ್ದರು. ಆತ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಶಂಕಿಸಿದ್ದಾರೆ. ಮಿಥುನ್ ಯಾವುದೇ ಹಿಂಜರಿಕೆಯಿಲ್ಲದೆ ಘಟನೆಯನ್ನು ವಿವರಿಸಿದ್ದಾನೆ ಮತ್ತು ಅವನು "ಮಗುವಿನಂತೆ ವರ್ತಿಸುತ್ತಾನೆ" ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments