ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಅಮುಲ್ ಬೆಂಬಲಿಸಿದ ಸಿಟಿ ರವಿ ಕನ್ನಡಿಗರ 'ಟೀಕೆ ರವಿ', ಕನ್ನಡಕ್ಕೆ 'ಕಂಟಕ ರವಿ': ಕಾಂಗ್ರೆಸ್ ಲೇವಡಿ

ಬೆಂಗಳೂರಿನ ಮಾರುಕಟ್ಟೆಗೆ ಅಮುಲ್ ಉತ್ಪನ್ನ ಲಗ್ಗೆ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾಡಿರುವ ಟ್ವೀಟ್ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಸಿಟಿ ರವಿ
Nagaraja AB
Updated On : 8 Apr 2023, 7:40 pm

ಬೆಂಗಳೂರು: ಬೆಂಗಳೂರಿನ ಮಾರುಕಟ್ಟೆಗೆ ಅಮುಲ್ ಉತ್ಪನ್ನ ಲಗ್ಗೆ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾಡಿರುವ ಟ್ವೀಟ್ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ನಂದಿನಿಯನ್ನು ಅಮೂಲ್‌ನಲ್ಲಿ ವಿಲೀನ ಮಾಡುತ್ತೇವೆ ಎಂದರೂ ಸಮರ್ಥನೆ. ಮೊಸರಿಗೆ ದಹಿ ಎಂದರೂ ಸಮರ್ಥನೆ ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ. ಹಿಂದಿ ಹೇರಿಕೆಗೂ ಸಮರ್ಥನೆ. ಸಿಟಿ ರವಿ ಅವರೇ, ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ ಎಂದು ಕಾಂಗ್ರೆಸ್ ಕಿಡಿಕಾರಿದೆ. 

ಕನ್ನಡಿಗರು ತಮ್ಮ ಹಕ್ಕುಗಳಿಗಾಗಿ, ತಮ್ಮ ಭಾಷೆಯ ಉಳಿವಿಗಾಗಿ, ತಾವು ಕಟ್ಟಿ ಬೆಳೆಸಿದ ಸಂಸ್ಥೆಗಳಿಗಾಗಿ ಹೋರಾಡಿದಾಗೆಲ್ಲ ಅಣಕಿಸುವ, ಟೀಕಿಸುವ ಸಿ.ಟಿ ರವಿಯವರೇ,  ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ಯಾಕಿಷ್ಟು ದ್ವೇಷ, ತಾತ್ಸಾರ? ಎಂದು ಪ್ರಶ್ನಿಸಿದ್ದು,  ಸಿಟಿ ರವಿ ಅಂದರೆ, ಕನ್ನಡಿಗರ ಟೀಕೆ ರವಿ! ಕನ್ನಡಕ್ಕೆ ಕಂಟಕ ರವಿ! ಎಂದು ಕುಹಕವಾಡಿದೆ.

Advertisement

Advertisement

ಇದನ್ನೂ ಓದಿ: ರಾಜ್ಯದಲ್ಲಿ ಅಮುಲ್ ಹಾಲು-ಮೊಸರು ಮಾರಾಟ: ನಂದಿನಿ ಮುಗಿಸಲು 3ನೇ ಸಂಚು ಎಂದ ಎಚ್‌ಡಿ ಕುಮಾರಸ್ವಾಮಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments