ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ  ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ  ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.

ಈ ಪೈಕಿ ಏಪ್ರಿಲ್ 8 ರಂದು ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ,ಧಾರವಾಡ, ಹಾವೇರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದಷ್ಟು ಕಡೆಗಳಲ್ಲಿ ಮಳೆಯಾಗಲಿದೆ.

ಇದರೊಂದಿಗೆ ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT