ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಗೇಲ್ ಪೈಪ್ ಲೈನ್ ಗ್ಯಾಸ್, ಸಿಎನ್‌ಜಿ ಬೆಲೆ ಕಡಿತ; ಪ್ರತಿ ಯೂನಿಟ್‌ಗೆ 7 ರೂ. ಇಳಿಕೆ

ಹೊಸ ದೇಶೀಯ ಅನಿಲ ಬೆಲೆಯ ಪ್ರಯೋಜನಗಳನ್ನು ಗ್ರಾಹಕರಿಗೆ ವರ್ಗಾಯಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಗೇಲ್ ಗ್ಯಾಸ್ ಲಿಮಿಟೆಡ್ ತನ್ನ ಬೆಲೆ ಕಡಿತ ಮಾಡಿದೆ.

ಗೇಲ್ ಪೈಪ್ ಲೈನ್ ಗ್ಯಾಸ್
Srinivasa Murthy VN
Updated On : 10 Apr 2023, 5:24 pm

ಬೆಂಗಳೂರು: ಹೊಸ ದೇಶೀಯ ಅನಿಲ ಬೆಲೆಯ ಪ್ರಯೋಜನಗಳನ್ನು ಗ್ರಾಹಕರಿಗೆ ವರ್ಗಾಯಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಗೇಲ್ ಗ್ಯಾಸ್ ಲಿಮಿಟೆಡ್ ತನ್ನ ಬೆಲೆ ಕಡಿತ ಮಾಡಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮತ್ತು ದಕ್ಷಿಣ ಕನ್ನಡದಲ್ಲಿ ಗೇಲ್ ಕಂಪನಿಯು ತನ್ನ ಡೊಮೆಸ್ಟಿಕ್ (ಗೃಹಬಳಕೆ) ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ) ಮತ್ತು ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (ಸಿಎನ್‌ಜಿ) ಬೆಲೆಗಳನ್ನು ಪ್ರತಿ ಯೂನಿಟ್‌ಗೆ 7 ರೂ.ಗಳಷ್ಟು ಕಡಿತಗೊಳಿಸುವುದಾಗಿ ಭಾನುವಾರ ಪ್ರಕಟಿಸಿದೆ.

ಇದನ್ನೂ ಓದಿ: ಬೆಂಗಳೂರು: 3 ದಿನಕ್ಕೊಮ್ಮೆ ಗ್ಯಾಸ್ ಪೈಪ್ ಲೈನ್ ಸೋರಿಕೆ; ಗೇಲ್ ಸಂಸ್ಥೆ ಹೇಳಿಕೆ

Advertisement

Advertisement

ಪರಿಷ್ಕೃತ ಬೆಲೆಗಳು ಭಾನುವಾರದಿಂದಲೇ ಜಾರಿಗೆ ಬಂದಿದ್ದು, ಪ್ರತಿ ಸ್ಟಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ (ಎಸ್‌ಸಿಎಂ) ಪಿಎನ್‌ಜಿಗೆ 51.50 ಮತ್ತು ಸಿಎನ್‌ಜಿಗೆ ಕೆಜಿಗೆ 82.50 ರೂ. "ಹೊಸ ಮಾರ್ಗಸೂಚಿಗಳು ಗ್ರಾಹಕರಿಗೆ ಸ್ಥಿರವಾದ ಬೆಲೆ ವ್ಯವಸ್ಥೆಯನ್ನು ಸ್ಥಾಪಿಸುವ ಗುರಿಯನ್ನು ಹೊಂದಿವೆ. ಸಿಎನ್‌ಜಿ ಮತ್ತು ಪಿಎನ್‌ಜಿಯನ್ನು ಆದ್ಯತೆಯ ಇಂಧನವಾಗಿ ಬಳಸುವುದರಿಂದ ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡಲು ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments