ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ದಿನ ಕಳೆಯುತ್ತಿದ್ದಂತೆಯೇ ಮಹತ್ವದ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿವೆ. ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಕಸರತ್ತು ಮುಂದುವರೆಸಿದ್ದು, ಸೋಮವಾರ ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, 170-180 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ: ಬಂಡಾಯ ನಾಯಕರ ಹತ್ತಿಕ್ಕಲು ಬಿಜೆಪಿ ರಣತಂತ್ರ, ಗುಜರಾತ್ ಮಾದರಿ ಅನುಸರಿಸಲು ನಿರ್ಧಾರ!
ಇದೇ ವೇಳೆ ಕೆಲವರನ್ನು ಹೊರತುಪಡಿಸಿ ಬಹುತೇಕ ಎಲ್ಲರಿಗೂ ಟಿಕೆಟ್ ಸಿಗಲಿದೆ ಎಂದು ಹೇಳುವ ಮೂಲಕ ಒಂದಿಷ್ಟು ಹೊಸ ಮುಖಗಳಿಗೆ ಮಣೆ ಹಾಕುವ ಸಂದೇಶ ರವಾನಿಸಿದರು.