ವಿಧಾನಸೌಧ 
ರಾಜ್ಯ

ಕಾಲೇಜು, ವಿವಿಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು: ರಾಜ್ಯ ಸರ್ಕಾರ ಆದೇಶ

ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಶುಲ್ಕ ಸಂಗ್ರಹಣೆ ಮತ್ತು ಇತರ ಹಣಕಾಸು ಪ್ರಕ್ರಿಯೆಗಳಿಗಾಗಿ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಯನ್ನು ಕಟ್ಟುನಿಟ್ಟಾಗಿ ಬಳಸಬೇಕು...

ಬೆಂಗಳೂರು: ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಶುಲ್ಕ ಸಂಗ್ರಹಣೆ ಮತ್ತು ಇತರ ಹಣಕಾಸು ಪ್ರಕ್ರಿಯೆಗಳಿಗಾಗಿ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಯನ್ನು ಕಟ್ಟುನಿಟ್ಟಾಗಿ ಬಳಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ವಿವಿಧ ಪ್ರಕ್ರಿಯೆಗಳನ್ನು ಕೈಗೊಳ್ಳಲು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಒಂದೇ ಡಿಜಿಟಲ್ ವೇದಿಕೆ ಒದಗಿಸುವ ಮಾರ್ಗವಾಗಿ UUCMS ಅನ್ನು ಕಳೆದ ವರ್ಷ ಜಾರಿಗೆ ತರಲಾಯಿತು. 

ಶಿಕ್ಷಣ ಇಲಾಖೆಯು ಈ ವ್ಯವಸ್ಥೆಯ ಅಡಿಯಲ್ಲಿ 10 ಮಾಡ್ಯೂಲ್‌ಗಳನ್ನು ಪ್ರಕಟಿಸಿದೆ. ಪ್ರವೇಶಗಳು, ಶೈಕ್ಷಣಿಕ ಮತ್ತು ವರ್ಗ ಮೇಲ್ವಿಚಾರಣೆ, ಪರೀಕ್ಷೆಗಳು, ಮಾನವ ಸಂಪನ್ಮೂಲ ನಿರ್ವಹಣೆ, ವಿದ್ಯಾರ್ಥಿ ಬೆಂಬಲ, ಮಾನ್ಯತೆ, ಆಸ್ತಿ ನಿರ್ವಹಣೆ, ಗ್ರಂಥಾಲಯ ನಿರ್ವಹಣೆ, ಹಣಕಾಸು ಯೋಜನೆ ಮತ್ತು ಮೇಲ್ವಿಚಾರಣೆ ಮತ್ತು ಸಂಶೋಧನಾ ಅಭಿವೃದ್ಧಿ.

ಇಲಾಖೆಯು ಕಳೆದ ವರ್ಷದಲ್ಲಿ ಹಂತ ಹಂತವಾಗಿ ಈ ಮಾಡ್ಯೂಲ್‌ಗಳನ್ನು ಬಿಡುಗಡೆ ಮಾಡಿದೆ, ಇತ್ತೀಚಿಗೆ ಮಾನ್ಯತೆ, ವಿದ್ಯಾರ್ಥಿ ಬೆಂಬಲ, ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಹಣಕಾಸು ಯೋಜನೆ ಮತ್ತು ಮೇಲ್ವಿಚಾರಣಾ ಮಾಡ್ಯೂಲ್‌ಗಳನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಬಿಡುಗಡೆ ಮಾಡಿದ್ದರು.

ಈ ನಿಟ್ಟಿನಲ್ಲಿ ಇಲಾಖೆಯು ಸರ್ಕಾರಿ ಆದೇಶವನ್ನು ಹೊರಡಿಸಿದ್ದು, ಯಾವುದೇ ಹಣಕಾಸಿನ ವ್ಯವಹಾರಗಳನ್ನು ಕೈಗೊಳ್ಳಲು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಯುಯುಸಿಎಂಎಸ್ ಅನ್ನು ಕಡ್ಡಾಯವಾಗಿ ಬಳಸಬೇಕು ಎಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT