ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮನೆ ಮುಂದೆ ನಾಯಿ ಗಲೀಜು ವಿಚಾರಕ್ಕೆ ಜಗಳ; ಓರ್ವನ ಸಾವು, ಮತ್ತೊಬ್ಬ ಗಂಭೀರ

ಮನೆ ಮುಂದೆ ನಾಯಿ ಕರೆದುಕೊಂಡು ಬಂದು ಗಲೀಜು ಮಾಡಿಸುವ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಾಗಿ ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಮನೆ ಮುಂದೆ ನಾಯಿ ಕರೆದುಕೊಂಡು ಬಂದು ಗಲೀಜು ಮಾಡಿಸುವ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಾಗಿ ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸೋಲದೇವನಹಳ್ಳಿಯ ಮುನಿರಾಜು ಕೊಲೆಯಾದವರು. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತ್ತೊರ್ವ ಮುರಳಿ ಸ್ಥಿತಿ ಚಿಂತಾಜನಕವಾಗಿದೆ. 

ಪೊಲೀಸ್ ಮೂಲಗಳ ಪ್ರಕಾರ ಪ್ರಮೋದ್ ಎಂಬಾತ ಮುನಿರಾಜು ಮನೆ ಮುಂದೆ ನಿತ್ಯ ನಾಯಿ ಕರೆದುಕೊಂಡು ವಾಕಿಂಗ್ ಗೆ ಹೋಗುತ್ತಿದ್ದು ಕೆಲ ದಿನಗಳ ಹಿಂದೆ ಪ್ರಮೋದ್ ಮತ್ತು ರವಿಕುಮಾರ್ ನಾಯಿ ಜೊತೆಗೆ ಬಂದು ಮುನಿರಾಜು ಮನೆ ಮುಂದೆ ಸಿಗರೇಟ್ ಸೇದಿ ಸಮಸ್ಯೆ ಉಂಟುಮಾಡಿದ್ದರು. ಇದರಿಂದ ಬೇಸತ್ತು ಮುನಿರಾಜು ಅವರಿಬ್ಬರ ವಿರುದ್ಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 

ಮುನಿರಾಜು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಮೋದ್ ಮತ್ತು ರವಿಕುಮಾರ್ ಅವರನ್ನು ಠಾಣೆಗೆ ಬರಹೇಳಿ ಇಬ್ಬರಿಗೂ ಬೈದು ಬುದ್ದಿ ಹೇಳಿ ಮುಚ್ಚಳಿಕೆ ಬರೆದು ಕಳುಹಿಸಲಾಗಿತ್ತು. ಆದರೆ ಇಬ್ಬರು ಠಾಣೆಗೆ ಹೋಗಿ ಬಂದ ಮರುದಿನ ಮತ್ತೆ ಮುನಿರಾಜು ಜೊತೆಗೆ ಗಲಾಟೆ ಮಾಡಿದ್ದಾರೆ. ಗಲಾಟೆ ವೇಳೆ ಪ್ರಮೋದ್, ಪತ್ನಿ ಪಲ್ಲವಿ ಮತ್ತು ರವಿಕುಮಾರ್ ಇಬ್ಬರು ಮುನಿರಾಜು ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮ ಮುನಿರಾಜು ಸಾವನ್ನಪ್ಪಿದ್ದು, ಮುರಳಿ ಎಂಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

ಈ ಸಂಬಂಧ ಸೋಲದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್