ರಾಜ್ಯ ಮುಕ್ತ ವಿವಿ 
ರಾಜ್ಯ

ಏಪ್ರಿಲ್ 15 ರಿಂದ ರಾಜ್ಯದಲ್ಲಿ ಕೆಎಸ್ಒಯು ವಿದ್ಯಾರ್ಥಿಗಳಿಗಾಗಿ ಡಿಜಿಟಲ್ ಉದ್ಯೋಗ ಮೇಳ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು)ದ ವತಿಯಿಂದ ಶನಿವಾರದಿಂದ 15 ದಿನಗಳ ಎಂಡ್ ಟು ಎಂಡ್ ಡಿಜಿಟಲ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಮೆಗಾ ವರ್ಚುವಲ್ ಉದ್ಯೋಗ ಮೇಳದಲ್ಲಿ ಸುಮಾರು 2,000 ಖಾಲಿ...

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು)ದ ವತಿಯಿಂದ ಶನಿವಾರದಿಂದ 15 ದಿನಗಳ ಎಂಡ್ ಟು ಎಂಡ್ ಡಿಜಿಟಲ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಮೆಗಾ ವರ್ಚುವಲ್ ಉದ್ಯೋಗ ಮೇಳದಲ್ಲಿ ಸುಮಾರು 2,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು 10ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕೆಎಸ್‌ಒಯು ಉಪಕುಲಪತಿ ಪ್ರೊ.ಶರಣಪ್ಪ ವಿ ಹಾಲ್ಸೆ ಅವರು, ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈ ಉದ್ಯೋಗ ಮೇಳ ಮುಕ್ತ ಅವಕಾಶ ನೀಡುತ್ತಿದೆ ಎಂದರು.

ಈ ಮೇಳದಲ್ಲಿ ಅಭ್ಯರ್ಥಿಗಳು 10ಕ್ಕೂ ಹೆಚ್ಚು ಕಂಪನಿಗಳಿಂದ 2,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಪಡೆದುಳ್ಳಬಹುದು, ಜೊತೆಗೆ ವಾರ್ಷಿಕ ರೂ 3 ಲಕ್ಷದಿಂದ ವಾರ್ಷಿಕ ರೂ 6 ಲಕ್ಷದವರೆಗೆ ವೇತನ ಪ್ಯಾಕೇಜ್‌ಗಳನ್ನು ಪಡೆಯಬಹುದು ಎಂದಿದ್ದಾರೆ.

ರಾಜ್ಯದಾದ್ಯಂತ ವಿದ್ಯಾರ್ಥಿಗಳು ದೂರದ ಸ್ಥಳಗಳಿಂದ ಬರುವುದು ಕಷ್ಟ. ಹೀಗಾಗಿ ವರ್ಚುವಲ್ ಮೂಲಕ ಉದ್ಯೋಗಾವಕಾಶಗಳನ್ನು ಹುಡುಕಲು ಸಹಾಯ ಮಾಡುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

Proofile.in ನಿಂದ ವೆಂಕಟೇಶ್ ಮಾತನಾಡಿ, ಪ್ಲೇಸ್‌ಮೆಂಟ್ ಡ್ರೈವ್‌ನ ಭಾಗವಾಗಿ ಅಭ್ಯರ್ಥಿಗಳಿಗೆ ವೆಬ್‌ನಾರ್‌ನಲ್ಲಿ ತರಬೇತಿ ನೀಡಲಾಗುತ್ತದೆ. ಅಲ್ಲಿ ಅವರು ತಮ್ಮ ಡಿಜಿಟಲ್ ರೆಸ್ಯೂಮ್‌ಗಳನ್ನು ಹೇಗೆ ಸಿದ್ಧಪಡಿಸಬೇಕು ಎಂದು ಹೇಳಿಕೊಡುತ್ತಾರೆ ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT