ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರಿನ ಹಲಸೂರಿನಲ್ಲಿ ಗಡಿ ಭದ್ರತಾ ಪಡೆ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ರೂಟ್ ಮಾರ್ಚ್ ನಡೆಸಿದರು. 
ರಾಜ್ಯ

ಮತಪ್ರಮಾಣ ಏರಿಕೆಗೆ ಕ್ರಮ: ಐಟಿ-ಬಿಟಿ ಸಂಸ್ಥೆಗಳೊಂದಿಗೆ ಮಾತುಕತೆ, ಜಾಗೃತಿ ಜಾಥಾ ನಡೆಸಿದ ಬಿಬಿಎಂಪಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತಪ್ರಮಾಣ ಏರಿಕೆ ಮಾಡಲು ಕ್ರಮಕೈಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಮಂಗಳವಾರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಜಾಗೃತಿ ಜಾಥಾವನ್ನು ನಡೆಸಿತು.

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತಪ್ರಮಾಣ ಏರಿಕೆ ಮಾಡಲು ಕ್ರಮಕೈಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಮಂಗಳವಾರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಜಾಗೃತಿ ಜಾಥಾವನ್ನು ನಡೆಸಿತು.

ಸಿದ್ದಯ್ಯ ಪುರಾಣಿಕ್ ರಸ್ತೆ, ಬಸವೇಶ್ವರನಗರದಲ್ಲಿರುವ ಸರ್ಕಾರಿ ಹೊಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮತ್ತು ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಸಹಾಯಕ ಕಾರ್ಯನಿರ್ವಾಹಕ ನಿರ್ದೇಶಕ, ಚುನಾವಣಾ ನೋಡಲ್ ಅಧಿಕಾರಿ ಉಮೇಶ್ ಮಾತನಾಡಿ, ನಗರ ಪ್ರದೇಶದಲ್ಲಿ ಮತದಾನ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಯೂ ತಮ್ಮ ಮತ ಹಕ್ಕು ಚಲಾಯಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ರಾಜೇಂದ್ರನ್, ಬಿಬಿಎಂಪಿ ಅಧಿಕಾರಿಗಳು, ಯುನಾನಿ ಕಾಲೇಜು ಪ್ರಾಂಶುಪಾಲೆ ಮಂಜುಳಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಬಿಬಿಎಂಪಿಯು ಪೂರ್ವ ವಲಯದಲ್ಲಿರುವ ಎಂಬೆಸಿ ಮಾನ್ಯತಾ ಬ್ಯುಸಿನೆಸ್ ಪಾರ್ಕ್‌ನಲ್ಲಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (SVEEP) ಅಭಿಯಾನವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಮತ್ತು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಮಾತನಾಡಿ, ಮತದಾನದ ಮಹತ್ವದ ಬಗ್ಗೆ IT/BT ಕಂಪನಿಗಳಿಗೆ ವಿವರಿಸಿದರು.

ಭಾರತೀಯ ಸಂವಿಧಾನವು ಈ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನಿಗೆ ಮತದಾನದ ಹಕ್ಕು ನೀಡಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT