ಜಗದೀಶ್ ಶೆಟ್ಟರ್ 
ರಾಜ್ಯ

ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡದೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್: ಮಹತ್ವದ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್!

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ 2 ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ 2 ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೈಕಮಾಂಡ್ ಕೊಕ್​ ನೀಡಿದ್ದು, ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೂ ಕೂಡ ಟಿಕೆಟ್​ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಶೆಟ್ಟರ್​ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದರು.

ಈ ಬೆಳವಣಿಗೆ ನಡುವಲ್ಲೇ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರನ್ನು ನವದೆಹಲಿಗೆ ಬರುವಂತೆ ದಿಢೀರ್ ಆಹ್ವಾನ ನೀಡಿದೆ

ಅದರಂತೆ ಜಗದೀಶ್ ಶೆಟ್ಟರ್​ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಟಿಕೆಟ್​ ಸಿಗುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರು ಏರ್​ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರುವ ವಿಶ್ವಾಸವಿದೆ ಎಂದು ಹೇಳಿದರು.

ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಪಕ್ಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನು ನಮ್ಮ ಸಚಿವರ ಮೂಲಕ ಮಾಡಿಸಿದ್ದೇನೆ. ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರು ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನುವುದಿಲ್ಲವೇ ಎಂದು ಪ್ರಶ್ನಿಸಿದರು.

ಇದೇ ವೇಳೆ ರಾಷ್ಟ್ರೀಯ ನಾಯಕರ ಭಾವನೆ‌ ಮೇಲೆ ನನ್ನ ನಿರ್ಧಾರವಿರುತ್ತದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT