ಜಿ.ಪರಮೇಶ್ವರ್ 
ರಾಜ್ಯ

ಅಹಿಂದ ಯೋಜನೆ, ಉಚಿತ ವಿದ್ಯುತ್, ಭ್ರಷ್ಟಾಚಾರ ನಿರ್ಮೂಲನಕ್ಕೆ ಪ್ರಣಾಳಿಕೆಯಲ್ಲಿ ಒತ್ತು: ಜಿ.ಪರಮೇಶ್ವರ್

ಉದ್ಯೋಗ, ಭ್ರಷ್ಟಾಚಾರ ಮುಕ್ತ ಹಾಗೂ ಜನರ ಜ್ವಲಂತ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಒತ್ತು ನೀಡಲಾಗುವುದು ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರು: ಉದ್ಯೋಗ, ಭ್ರಷ್ಟಾಚಾರ ಮುಕ್ತ ಹಾಗೂ ಜನರ ಜ್ವಲಂತ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಒತ್ತು ನೀಡಲಾಗುವುದು ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಣಾಳಿಕೆ ತಯಾರಿಗೆ ನಾಲ್ಕು ತಿಂಗಳ ಹಿಂದೆ ನಮಗೆ ಜವಾಬ್ದಾರಿ ‌ಕೊಡಲಾಗಿತ್ತು. ಜನಪರವಾದ ಪ್ರಣಾಳಿಕೆ ತಯಾರಿಸಲು ಲಕ್ಷಾಂತರ ಜನರ ಜೊತೆ ಚರ್ಚೆ ಮಾಡಿದ್ದೇವೆ. ನೌಕರರ ವರ್ಗದ ಜೊತೆ ಚರ್ಚೆ ಮಾಡಿದ್ದೇವೆ. ಎಫ್ ಕೆ ಸಿಸಿ ಅವರ ಜೊತೆ ಸುಧೀರ್ಘವಾಗಿ ಚರ್ಚೆ ಮಾಡಿದ್ದೇವೆ ಅಷ್ಟೇ ಅಲ್ಲದೆ, ಜಿಲ್ಲಾವಾರು ಅಧಿಕಾರಿಗಳ ಕರೆದು ಚರ್ಚೆ ಮಾಡಿದ್ದೇವೆ ಎಂದರು.

ಜನರ ಜ್ವಲಂತ ಸಮಸ್ಯೆಗಳ ಜೊತೆಗೆ ಖಾಲಿ ಇರುವ 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದು ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು, ಸೇರಿದಂತೆ ಹಲವು ವಿಷಯಗಳ ಸಂಬಂಧ ಜನರ ಅಭಿಪ್ರಾಯ ಹಾಗೂ ಸಲಹೆ ಪಡೆದಿದ್ದೇವೆ ಎಂದರು.

ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ್ದೇವೆ‌. ರೈತನಿಗೆ ವಿದ್ಯುತ್ ಪೂರೈಕೆ ಇದುವರೆಗೆ ಸಾಧ್ಯವಾಗಿಲ್ಲ. ಉಚಿತ ವಿದ್ಯುತ್ ಪೂರೈಕೆ ಗೆ ಬೇಕಾದ ಕೆಲಸಗಳನ್ನು ಮಾಡುತ್ತೇವೆ. ಹಿಂದುಳಿದ ದಲಿತ ಅಲ್ಪಸಂಖ್ಯಾತ ಸಮುದಾಯಗಳಿಗೆ ನಿರ್ದಿಷ್ಟ ಕಾರ್ಯಕ್ರಮ ನೀಡಬೇಕು.

ಟೂರಿಸಂನಲ್ಲಿ ನಾವು ಬಹಳ ಹಿಂದೆ ಉಳಿದಿದ್ದೇವೆ. ಪಕ್ಕದ ಕೇರಳದಲ್ಲಿ ಕೋಟ್ಯಾಂತರ ರೂ. ಟೂರಿಸಂನಿಂದಲೇ ಬರುತ್ತದೆ. ಟೂರಿಸಂ ಅಭಿವೃದ್ಧಿ ಕೂಡ ಗಣನೆಗೆ ತೆಗೆದುಕೊಂಡಿದ್ದೇವೆ ಎಂದರು. ನಾವು ಕೇರಳದ ಮಾದರಿಯಲ್ಲಿ ರಾಜ್ಯದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಅನ್ವೇಷಿಸಬೇಕಾಗಿದೆ. ಉದ್ಯೋಗವಿಲ್ಲದೆ ಬೀದಿ ಪಾಲಾಗಿರುವ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೂ ಗಮನ ಹರಿಸಲಾಗಿದೆ' ಎಂದರು.

ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕ, ಆದರೆ ದೇವಸ್ಥಾನ ನಿರ್ವಹಣೆ ಮಾಡುವುದಕ್ಕೆ ಯೋಜನೆಗಳ ಅವಶ್ಯಕತೆ ಇದೆ. ಧಾರ್ಮಿಕ ಸಾಮರಸ್ಯ ಇಡೀ ರಾಜ್ಯದಲ್ಲಿ ಅತ್ಯಗತ್ಯವಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT