ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸುತ್ತಿರುವ ಸಿಎಂ ಬೊಮ್ಮಾಯಿ. 
ರಾಜ್ಯ

ವಿಧಾನಸೌಧ ಆವರಣದಲ್ಲಿ ಅಂಬೇಡ್ಕರ್ ಜಯಂತಿ: ಜಯ್ ಭೀಮ್ ಎಂದು ಘೋಷಣೆ ಕೂಗಿ ಪುಷ್ಪನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ  ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಜಯ್ ಭೀಮ್ ಎಂದು ಘೋಷಣೆ ಕೂಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುಷ್ಪನಮನ ಸಲ್ಲಿಸಿದರು.

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ  ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಜಯ್ ಭೀಮ್ ಎಂದು ಘೋಷಣೆ ಕೂಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುಷ್ಪನಮನ ಸಲ್ಲಿಸಿದರು.

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಬೊಮ್ಮಾಯಿಯವರು, ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ||ಬಿ.ಆರ್.ಅಂಬೇಡ್ಕರ್ ರವರ ಜನ್ಮ ಸ್ಮರಣೆಯಂದು ಅವರಿಗೆ ಗೌರವಪೂರ್ವಕ ನಮನಗಳು. ಸಮಾಜದಲ್ಲಿ ಸಮಾನತೆಯನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಏಳಿಗೆಗಾಗಿ ನಿರಂತರವಾಗಿ ಶ್ರಮಿಸಿದ ಡಾ.ಅಂಬೇಡ್ಕರ್ ರವರ ಸಾಧನೆ ಹಾಗೂ ದೇಶ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಹೇಳಿದ್ದರು.

ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುತ್ತದೆ. ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು.

ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‌ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿ ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು. 1927 ರ ಜೂನ್‌ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜನ್ಮದಿನವಾಗಿ ಇಂದು ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್