ಸಿದ್ದರಾಮಯ್ಯ 
ರಾಜ್ಯ

ನಾನು ಸಿಎಂ ಆಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ: ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ ಎಂದ ಸಿದ್ದರಾಮಯ್ಯ

ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಬೇಡ್ಕರ್ ಜಯಂತಿ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ. ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ. ಈ ಋಣ ಸಂದಾಯಕ್ಕೆ ನನ್ನ ರಾಜಕೀಯ ಮುಡಿಪು. ಮಹಾಗುರುವಿಗೆ ನಮನಗಳು ಎಂದು ಹೇಳಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ. ಈ ಹೋರಾಟಕ್ಕೆ ಬಾಬಾಸಾಹೇಬರ ಚಿಂತನೆಗಳು ನಮ್ಮ ಆಯುಧವಾಗಲಿ ಎಂದು ಹೇಳಿದ್ದಾರೆ.

ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು ಎಂಬ ಬಿ.ಆರ್.ಅಂಬೇಡ್ಕರರ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ. ಇದು ನಾನು ಬಾಬಾ ಸಾಹೇಬರಿಗೆ ಸಲ್ಲಿಸಿದ ಗೌರವವೂ ಹೌದು ಎಂದು ತಿಳಿಸಿದ್ದಾರೆ.

ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ಸಾಮಾಜಿಕ ಮಾಧ್ಯಮಗಳಿಗೆ ಕಡಿವಾಣ: ಮೆಟಾ, ಎಕ್ಸ್, ಗೂಗಲ್, ಸ್ನ್ಯಾಪ್‌ಚಾಟ್‌ಗೆ ಸಂಸದೀಯ ಸಮಿತಿ ಸಮನ್ಸ್

ಸಿಜೆಪಿ ನೇತೃತ್ವದ ಪ್ರತಿಭಟನೆಗೆ ಪಾಕಿಸ್ತಾನದ Gen Z ಬೆಂಬಲ: MEA ತೀಕ್ಷ್ಣ ಪ್ರತಿಕ್ರಿಯೆ! Video

'ನನ್ನ ಕಾಲುಗಳು ನಡುಗುತ್ತಿದ್ದವು'; ಕ್ಯಾರವಾನ್‌ಗೆ ನುಗ್ಗಿ ಶರ್ಟ್ ಬಿಚ್ಚಿದ...: ಆಘಾತಕಾರಿ ಅನುಭವ ಬಿಚ್ಚಿಟ್ಟ ನಟಿ Kajal Aggarwal

LS Debate: ದೇಶದ ಯುವಶಕ್ತಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಚ್ಚಿಬಿದ್ದಿದೆ: ಸಂಸದೆ ಪ್ರಿಯಾಂಕಾ ವಾದ್ರಾ