ಸಂಗ್ರಹ ಚಿತ್ರ 
ರಾಜ್ಯ

ಜೆಡಿಎಸ್'ಗೆ ಸೇರ್ಪಡೆಗೊಂಡು ಬಿಜೆಪಿಗೆ ಪಾಠ ಕಲಿಸಿ: ಎನ್ಆರ್ ರಮೇಶ್ ಗೆ ಬೆಂಬಲಿಗರ ಒತ್ತಾಯ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ, ಬಂಡಾಯದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ, ಬಂಡಾಯದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಜಯನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಅವರ ಬೆಂಬಲಿಗರು ತೀವ್ರವಾಗಿ ಅಸಮಾಧಾನಗೊಂಡಿದ್ದು, ಜೆಡಿಎಸ್ ಸೇರಿ ಪದ್ಮನಾಭನಗರ ಹಾಗೂ ಜಯನಗರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಪಟ್ಟು ಹಿಡಿದಿದ್ದಾರೆ.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರು ವಾರ್ಡ್ ನಾಗರಿಕರ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅವರು, ರಮೇಶ್ ಅವರು ಜೆಡಿಎಸ್ ಸೇರಿ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಬೇಕು, ಎರಡೂ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ರಮೇಶ್ ಅವರು ಕಳೆದ 24 ವರ್ಷಗಳಿಂದ ಬಿಜೆಪಿಗಾಗಿ ಅವಿರತವಾಗಿ ಶ್ರಮಿಸಿದ್ದಾರೆ ಮತ್ತು ಪಕ್ಷವನ್ನು ಉನ್ನತ ಮಟ್ಟಕ್ಕೆ ಏರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನೂರಾರು ದೊಡ್ಡ ಹಗರಣಗಳು ಮತ್ತು ಭ್ರಷ್ಟಾಚಾರಗಳನ್ನು ಅವರು ಬಹಿರಂಗಪಡಿಸಿದ್ದರಿಂದಲೇ ರಾಜ್ಯದಲ್ಲಿ ಬಿಜೆಪಿ ಎತ್ತರಕ್ಕೆ ಹೋಗಲು ಸಾಧ್ಯವಾಯಿತು.

ಸುಶಿಕ್ಷಿತರ ಪಕ್ಷ ಎಂದು ಬಿಂಬಿಸಿಕೊಳ್ಳುವ ಬಿಜೆಪಿ, ಸರ್ಕಾರಿ ಭೂಕಬಳಿಕೆ ಹಾಗೂ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂದರು.

ಪದ್ಮನಾಭನಗರ ಶಾಸಕ ಹಾಗೂ ಕಂದಾಯ ಸಚಿವ ಆರ್.ಅಶೋಕ ಅವರು ಕಾಂಗ್ರೆಸ್ ಮುಖಂಡರಾದ ಎನ್.ಎ.ಹರೀಸ್ ಮತ್ತು ಇತರರೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ, ಹೀಗಾಗಿ ಚಾಮರಾಜಪೇಟೆ, ಬಿಎಂಟಿ ಲೇಔಟ್ ಮತ್ತಿತರ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರು ಭಯದಲ್ಲಿದ್ದಾರೆಂದು ಆರೋಪಿಸಿದ್ದಾರೆ. ಬೆಂಬಲಿಗರು ಜೆಡಿಎಸ್ ಸೇರುವಂತೆ ಒತ್ತಾಯಿಸುತ್ತಿದ್ದರೂ ರಮೇಶ್ ಅವರು ಮಾತ್ರ ಟಿಕೆಟ್ ಹಂಚಿಕೆಯಾಗದಿರುವ ಕುರಿತು ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ