ಪ್ರತ್ಯಕ್ಷ ದೃಶ್ಯ 
ರಾಜ್ಯ

ಮಡಿಕೇರಿ: ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣ

ಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಮಡಿಕೇರಿ: ಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಕೆಎಸ್ಆರ್ ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. 

ಕಾರಿನಲ್ಲಿ ಪ್ರಮಾಣಿಸುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನುಳಿದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಕೆಎಸ್ಆರ್ ಟಿಸಿ ಬಸ್ ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿತ್ತು. ಇನ್ನು ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡಿರುವ ಮತ್ತಿಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯ ಹೈಡ್ರಾಮಕ್ಕೆ ತೆರೆ: ಬೆಳಗ್ಗೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ; ಮೇ 13ಕ್ಕೆ ಬಹುಮತ ಸಾಬೀತು

ತಮಿಳುನಾಡಿನ ನೂತನ ಸಿಎಂ ಆಗಿ TVK ಮುಖ್ಯಸ್ಥ ವಿಜಯ್ ಪದಗ್ರಹಣ ಸಮಾರಂಭಕ್ಕೆ Rahul Gandhi, ಹೊಸ ಮೈತ್ರಿಕೂಟ ರಚನೆ ಸಂಕೇತ!

ಗುಜರಾತ್ ಟೈಟನ್ಸ್‌ಗೆ ಸತತ 4ನೇ ಗೆಲುವು: 77 ರನ್‌ಗಳಿಂದ ರಾಜಸ್ಥಾನಕ್ಕೆ ಹೀನಾಯ ಸೋಲು, 4ನೇ ಸ್ಥಾನಕ್ಕೆ ಕುಸಿದ RCB!

ಪಾಕ್ ISI ಮಾಡ್ಯೂಲ್ ಬಯಲಾದ ಬೆನ್ನಲ್ಲೇ ಉಗ್ರ ದಾಳಿಯ ಬಗ್ಗೆ ಗುಪ್ತಚರ ಎಚ್ಚರಿಕೆ: ದೆಹಲಿಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಸಿಎಂ ಆಯ್ಕೆ ಕಗ್ಗಂಟು: ಮೂವರು ಘಟಾನುಘಟಿಗಳ ನೇರ ಹಣಾಹಣಿ, ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್!

SCROLL FOR NEXT