ರಾಜ್ಯ

ವಿಧಾನಸಭಾ ಚುನಾವಣೆ: ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

Manjula VN

ಹಾವೇರಿ/ಧಾರವಾಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ‌ ಶನಿವಾರ ನಾಮಪತ್ರ ಸಲ್ಲಿಸಿದರು.

ಬೆಂಗಳೂರಿನಿಂದ ಶಿಗ್ಗಾಂವಿಗೆ ಆಗಮಿಸಿದ ಬೊಮ್ಮಾಯಿಯಿರುವ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
 
ಈ ವೇಳೆ ಸಂಸದ ಶಿವಕುಮಾರ್ ಉದಾಸಿ, ಸಚಿವ ಸಿ.ಸಿ ಪಾಟೀಲ್, ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡರು ಮತ್ತು ಕುಟುಂಬಸ್ಥರು ಸಿಎಂ ಬೊಮ್ಮಾಯಿಗೆ ಸಾಥ್ ನೀಡಿದರು.

ಇದಕ್ಕೂ ಮುನ್ನ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಸಿಎಂ ಬೊಮ್ಮಾಯಿ ಅವರು ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಶ್ರೀಗಳ ದರ್ಶನ ಪಡೆದರು. ನಂತರ ಅಮರಗೋಳದಲ್ಲಿನ ತಂದೆ ತಾಯಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಶಿಗ್ಗಾಂವಿಗೆ ಆಗಮಿಸಿದ್ದರು.

ಶಿಗ್ಗಾಂವಿ ಪುರಸಭೆ ಬಳಿಯ ಚನ್ನಮ್ಮ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಜೊತೆಗೆ ಗ್ರಾಮ ದೇವತೆ ದರ್ಶನ ಪಡೆದು ನಾಮಪತ್ರ ಸಲ್ಲಿಸಲು ತಹಶೀಲ್ದಾರ್ ಕಚೇರಿಗೆ ತೆರಳಿದರು.

ನಾಮಪತ್ರ ಸಲ್ಲಿಸಿದ ನಂತರ ವಿವಿಧೆಡೆ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಎಲ್ಲಾ ಜಿಲ್ಲಾ ಪಂಚಾಯಿತಿ ಮತಕ್ಷೇತ್ರಗಳ ಮುಖಂಡರ ಸಭೆ ನಡೆಸಲಿದ್ದಾರೆ.

ಹುರುಳಿಕುಪ್ಪಿ, ಕಾರಡಗಿ, ತಡಸ, ಧುಂಡಸಿ, ಹುಲುಗೂರು, ಕುಂದೂರು, ಜಿಲ್ಲಾ ಪಂಚಾಯಿತಿ ವ್ಯಾಪ್ತಿ ಮುಖಂಡರ ಜೊತೆ ಸಿಎಂ ಸಭೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಇನ್ನು ಅಭ್ಯರ್ಥಿಯ ಹುಡುಕಾಟ ಆರಂಭಿಸಿದ್ದರೆ, ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಸುವ ಮೂಲಕ ತಮ್ಮ ಚುನಾವಣೆಯ ಪ್ರಚಾರ ಆರಂಭಿಸಿದ್ದಾರೆ.

SCROLL FOR NEXT