ರಾಹುಲ್ ಗಾಂಧಿ 
ರಾಜ್ಯ

ಅದಾನಿ ಭ್ರಷ್ಟಾಚಾರದ ಪ್ರತೀಕ; ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿ

ಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕೋಲಾರ: ಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

2019ರಲ್ಲಿ ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತು. ನಂತರ ಅವರನ್ನು ಲೋಸಕಭಾ ಸಂಸದ ಸ್ಥಾನದಿಂದ ಅನರ್ಹಗೊಲಿಸಲಾಯಿತು. 

ಮಾರ್ಚ್ 29 ರಂದು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಕರ್ನಾಟಕಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡಿರುವ ಅವರು, ಪ್ರಧಾನಿಯನ್ನು ಗುರಿಯಾಗಿಸಲು ಅದಾನಿ ವಿಷಯವನ್ನು ಒತ್ತಿ ಹೇಳಿದರು. ಇಲ್ಲಿ ನಡೆದ 'ಜೈ ಭಾರತ್' ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಅದಾನಿ ಭ್ರಷ್ಟಾಚಾರದ ಸಂಕೇತ ಎಂದರು.

ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಾರ್ವಜನಿಕ ಸಭೆಯ ಸ್ಥಳದಲ್ಲಿ ಸ್ಥಾಪಿಸಲಾದ ಪಕ್ಷದ ಹಿರಿಯ ನಾಯಕರ ದೈತ್ಯ ಕಟೌಟ್‌ಗಳು

ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷವು ಸರ್ಕಾರ ರಚಿಸಿದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ತನ್ನ ಪ್ರಮುಖ ಚುನಾವಣಾ ಭರವಸೆಗಳನ್ನು ಅಂಗೀಕರಿಸುತ್ತದೆ ಮತ್ತು ಅವುಗಳ ಅನುಷ್ಠಾನಕ್ಕೆ ದಾರಿ ಮಾಡಿಕೊಡಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಎದುರಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮಾರ್ಚ್ 23ರಂದು ಗುಜರಾತ್‌ನ ಸೂರತ್‌ನ ನ್ಯಾಯಾಲಯವು 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ 'ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ' ಎಂಬ ಹೇಳಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

2019ರ ಏಪ್ರಿಲ್‌ನಲ್ಲಿ ಕೋಲಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು.

ಸಾರ್ವಜನಿಕ ಸಭೆಯ ಸ್ಥಳದಲ್ಲಿ ಸ್ಥಾಪಿಸಲಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕಟೌಟ್‌ಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT