ಸಿಎಂ ಬೊಮ್ಮಾಯಿ 
ರಾಜ್ಯ

ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ: ಸಿಎಂ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ನಾಯಕರ ರಹಸ್ಯ ಸಭೆ

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಯಲು ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾದಾನಗೊಂಡಿರುವ ಜಗದೀಶ್ ಶೆಟ್ಟರ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ನಾಯಕರು ರಹಸ್ಯ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಯಲು ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾದಾನಗೊಂಡಿರುವ ಜಗದೀಶ್ ಶೆಟ್ಟರ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ನಾಯಕರು ರಹಸ್ಯ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಬ್ಬಳ್ಳಿಯ ನಿವಾಸದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಚಿವ ಗೋವಿಂದ್ ಕಾರಜೋಳ, ಮಾಜಿ ಸಚಿವ ರಮೇಶ್​ ಜಾರಕಿಹೊಳಿ ​ಅವರು ರಹಸ್ಯ ಸಭೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಈ ನಡುವೆ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರವ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆದಿದ್ದಾರೆಂದು ತಿಳಿದುಬಂದಿದೆ.

ಈ ಪ್ರಯಾಣದಲ್ಲಿ ಧಾರವಾಡ ಜಿಲ್ಲೆಯ ಕಾಂಗ್ರೆಸ್​ ಮುಖಂಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಆಪ್ತ ಜೊತೆಯಾಗಿದ್ದಾರೆಂದು ಹೇಳಲಾಗುತ್ತಿದ್ದು, ಈ ಬೆಳವಣಿಗೆ ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

ಇರಾನ್ ಜೊತೆಗೆ ಸರಣಿ ಮಾತುಕತೆ: ಹಾರ್ಮುಜ್ ಜಲಸಂಧಿ ದಾಟಿದ LPG ಹೊತ್ತ ಭಾರತದ 2 ಹಡಗುಗಳು!

ಜಾಗತಿಕ ಸಂಘರ್ಷಗಳ ಪರಿಣಾಮ ಕಡಿಮೆ ಮಾಡಲು ಸರ್ಕಾರ ಕೆಲಸ, ಕಾಂಗ್ರೆಸ್ ಭೀತಿ ಸೃಷ್ಟಿಸಲು ಯತ್ನ: ಪ್ರಧಾನಿ ನರೇಂದ್ರ ಮೋದಿ

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಹೊಸ ಖಮೇನಿ ಭಯೋತ್ಪಾದಕ ನಾಯಕ; ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಮಿಲಿಯನ್ ಡಾಲರ್ ಬಹುಮಾನ: ಅಮೆರಿಕ

SCROLL FOR NEXT