ಸಂಗ್ರಹ ಚಿತ್ರ 
ರಾಜ್ಯ

ಡೆಂಗ್ಯೂ, ಮಲೇರಿಯಾ ಪ್ರಕರಣಗಳಲ್ಲಿ ಹೆಚ್ಚಳ; ಸ್ವಚ್ಛತೆ ಕಾಪಾಡಿ, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರ ಸಲಹೆ

ರಾಜ್ಯದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳು ಕ್ರಮೇಣ ಏರಿಕೆಯಾಗುತ್ತಿದ್ದು, ಸುತ್ತಮುತ್ತಲಿನ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳು ಕ್ರಮೇಣ ಏರಿಕೆಯಾಗುತ್ತಿದ್ದು, ಸುತ್ತಮುತ್ತಲಿನ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ.

ಕೆಸಿ ಜನರಲ್ ಆಸ್ಪತ್ರೆಯ ಜನರಲ್ ವೈದ್ಯಾಧಿಕಾರಿ ಡಾ.ಲಕ್ಷ್ಮೀಪತಿ ಮಾತನಾಡಿ, ಆಸ್ಪತ್ರೆಯಲ್ಲಿ ಪ್ರತಿದಿನ ಸುಮಾರು 3-4 ರೋಗಿಗಳು ದಾಖಲಾಗುತ್ತಿದ್ದಾರೆ. ಆದರೆ, ಸದ್ಯಕ್ಕೆ ಇದು ಆತಂಕಕ್ಕೆ ಕಾರಣವಲ್ಲ. ಜ್ವರದ ಲಕ್ಷಣಗಳೊಂದಿಗೆ ಹೊರರೋಗಿ ವಿಭಾಗಕ್ಕೆ ರೋಗಿಗಳು ಬರುತ್ತಿದ್ದಾರೆ, ಮಲೇರಿಯಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿದಿನ 1-2 ಪ್ರಕರಣಗಳು ವರದಿಯಾಗುತ್ತವೆ ಎಂದು ಹೇಳಿದ್ದಾರೆ.
 
ಸರಿಯಾದ ಔಷಧಿಗಳನ್ನು ನೀಡಿದರೆ, ಹೆಚ್ಚಿನ ರೋಗಿಗಳು ಒಂದು ವಾರದ ಸಮಯದಲ್ಲಿ ಚೇತರಿಸಿಕೊಳ್ಳುತ್ತಾರೆಂದು ತಿಳಿಸಿದ್ದಾರೆ.

ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮದ (ಎನ್‌ವಿಬಿಡಿಸಿಪಿ) ಉಪನಿರ್ದೇಶಕ ಡಾ.ಶರೀಫ್ ಮಾತನಾಡಿ, ಸದ್ಯಕ್ಕೆ ಕರ್ನಾಟಕದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿಲ್ಲ. ರಾಜ್ಯದಲ್ಲಿ ಡೆಂಗ್ಯೂಗೆ ಸಂಬಂಧಿಸಿದಂತೆ ಒಟ್ಟು 3,828 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಏಪ್ರಿಲ್ 1 ರಿಂದ 320 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ ಎಂದು ಹೇಳಿದ್ದಾರೆ.

ಬೇಸಿಗೆಯಲ್ಲಿ ಭೂಮಿಯನ್ನು ತಂಪಾಗಿರಿಸಲು ನೀರನ್ನು ಹಾಕುತ್ತಾರೆ. ನೀರಿನ ಕೊರತೆ ಎದುರಾಗುವ ಹಿನ್ನೆಲೆಯಲ್ಲಿ ಹೊರಗೆ ಪಾತ್ರಗಳಲ್ಲಿ ನೀರನ್ನು ಸಂಗ್ರಹಿಸುತ್ತಾರೆ. ಕೂಲರ್ ಗಳಲ್ಲಿ ನೀರು ಬದಲಾಯಿಸದ ಕಾರಣ ಸೊಳ್ಳೆಗಳು ಇಲ್ಲಿ ಆಶ್ರಯಿಸುತ್ತೇವೆ. ಎಲ್ಲೆಲ್ಲಿ ನೀರು ತುಂಬಿರುತ್ತದೆಯೋ ಅಲ್ಲಿ ಸೊಳ್ಳೆಗಳು  ಸಂತಾನೋತ್ಪತ್ತಿ ಮಾಡಲು ಜಾಗವನ್ನು ಕಂಡು ಕೊಳ್ಳುತ್ತವೆ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಇಂತಹ ಪ್ರಕರಣಗಳಲ್ಲಿ ಏರಿಕೆಗಳು ಕಂಡು ಬರುತ್ತಿವೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಸಾಮಾನ್ಯವಾಗಿ, ಮಳೆಗಾಲದಲ್ಲಿ ಪ್ರಕರಣಗಳಲ್ಲಿ ಏರಿಕೆಗಳು ಕಂಡು ಬರುತ್ತವೆ. ಆದರೆ, ಈ ಬಾರಿ ಹವಾಮಾನ ಬದಲಾವಣೆಯಿಂದಾಗಿ ವಾತಾವರಣ ತೇವಾಂಶದಿಂದ ಕೂಡಿರುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗುತ್ತಿವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT