ವಿಧಾನಸೌಧ 
ರಾಜ್ಯ

ಕರ್ನಾಟಕ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಿಂದಾಗಿ ಸರ್ಕಾರದ ಕಾಶಿ ಯಾತ್ರೆ ರದ್ದು

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಅಂಗವಾಗಿ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದ್ದು, ರಾಜ್ಯ ಸರ್ಕಾರವು 'ಭಾರತ್ ಗೌರವ್ ಕಾಶಿ ದರ್ಶನ' ಯೋಜನೆಯಡಿಯಲ್ಲಿ ವಾರಣಾಸಿ ಮತ್ತು ಅಯೋಧ್ಯೆಗೆ ತನ್ನ ಪ್ರಮುಖ ತೀರ್ಥಯಾತ್ರೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಅಂಗವಾಗಿ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದ್ದು, ರಾಜ್ಯ ಸರ್ಕಾರವು 'ಭಾರತ ಗೌರವ ಕಾಶಿ ದರ್ಶನ' ಯೋಜನೆಯಡಿಯಲ್ಲಿ ವಾರಣಾಸಿ ಮತ್ತು ಅಯೋಧ್ಯೆಗೆ ತನ್ನ ಪ್ರಮುಖ ತೀರ್ಥಯಾತ್ರೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಏಪ್ರಿಲ್ 14 ಮತ್ತು 28 ರಂದು ಎರಡು ಬ್ಯಾಚ್‌ಗಳಲ್ಲಿ ಯಾತ್ರೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ಚುನಾವಣಾ ಆಯೋಗದ ನಿರ್ದೇಶನದ ನಂತರ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಕಾರ್ಯಕ್ರಮವನ್ನು ಆಯೋಜಿಸುವ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 29 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಬುಕಿಂಗ್ ಅನ್ನು ತಕ್ಷಣವೇ ನಿಲ್ಲಿಸುವಂತೆ ಚುನಾವಣಾ ಆಯೋಗವು ಏಪ್ರಿಲ್ 14 ರಂದು ತನ್ನ ಪತ್ರದಲ್ಲಿ ಸೂಚಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಯಾತ್ರೆ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡದ ಕಾರಣ ಅದನ್ನು ರದ್ದುಗೊಳಿಸಲಾಗಿದೆ ಎಂದು ಈ ಮೂಲಕ ತಿಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT