cVIGIL ಅಪ್ಲಿಕೇಶನ್ 
ರಾಜ್ಯ

cVIGIL ಆ್ಯಪ್ ನಲ್ಲಿ 3 ಸಾವಿರಕ್ಕೂ ಅಧಿಕ ದೂರು, 161 ಕೋಟಿ ರೂ ನಗದು ವಶಕ್ಕೆ!

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮತದಾರರ ಸೆಳೆಯಲು ರಾಜಕೀಯ ನಾಯಕರು ಹರಸಾಹಸ ಪಡುತ್ತಿದ್ದು, ಇದರ ನಡುವೆಯೇ ಚುನಾವಣಾ ಆಯೋಗದ ಸಿವಿಜಿಲ್ ಆ್ಯಪ್ ನಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಚುನಾವಣಾ ಅಕ್ರಮದ ದೂರುಗಳು ಬಂದಿವೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮತದಾರರ ಸೆಳೆಯಲು ರಾಜಕೀಯ ನಾಯಕರು ಹರಸಾಹಸ ಪಡುತ್ತಿದ್ದು, ಇದರ ನಡುವೆಯೇ ಚುನಾವಣಾ ಆಯೋಗದ ಸಿವಿಜಿಲ್ ಆ್ಯಪ್ ನಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಚುನಾವಣಾ ಅಕ್ರಮದ ದೂರುಗಳು ಬಂದಿವೆ.

ಭಾರತದ ಚುನಾವಣಾ ಆಯೋಗ ಸಿವಿಜಿಲ್ (cVIGIL)​ ಆ್ಯಪ್​ವೊಂದನ್ನು ಪರಿಚಯಿಸಿದ್ದು, ಇದರ ಮೂಲಕ ಸಾರ್ವಜನಿಕರು ಆಯೋಗಕ್ಕೆ ದೂರು ನೀಡಬಹುದಾಗಿದೆ. ಹೀಗೆ ಆ್ಯಪ್​ ಮೂಲಕ ಇಲ್ಲಿಯವರೆಗೆ 3,147 ದೂರು ದಾಖಲಾಗಿದ್ದು, ಅದರಲ್ಲಿ 2,643 ದೂರುಗಳು ಸತ್ಯವಾಗಿವೆ ಎಂದು ಚುನಾವಣಾ ಆಯೋಗ ಹೇಳಿದೆ. ಸಿವಿಜಿಲ್ ಮೂಲಕ ಹೆಚ್ಚಿನ ದೂರುಗಳು ಅನುಮತಿಯಿಲ್ಲದೆ ಬ್ಯಾನರ್ ಅಥವಾ ಪೋಸ್ಟರ್‌ಗಳನ್ನು ಹಾಕುವ ಬಗ್ಗೆ ಮತ್ತು ಉಡುಗೊರೆ, ಹಣ, ಮದ್ಯ ಮತ್ತು ಆಸ್ತಿ ಹಾನಿ ಕುರಿತಾಗಿವೆ. ಈ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್‌ಗಳು ಮತ್ತು ಪೊಲೀಸ್ ಅಧಿಕಾರಿಗಳು ಇಲ್ಲಿಯವರೆಗೆ 1,334 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್​ 29ರಿಂದ ಏಪ್ರಿಲ್​ 14ರ ತನಕ ಚುನಾವಣಾ ಅಧಿಕಾರಿಗಳು 161 ಕೋಟಿ ರೂ. ಹಣ, ಉಡುಗೊರೆ, ಮಾದಕ ವಸ್ತುಗಳನ್ನು ಮತ್ತು ಲೋಹಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಆದಾಯ ತೆರಿಗೆ ಇಲಾಖೆ ಬೆಂಗಳೂರಿನ ದಾಸರಹಳ್ಳಿ, ಶಿವಾಜಿನಗರ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಬಿಟಿಎಂ ಲೇಔಟ್ ಮತ್ತು ಮಲ್ಲೇಶ್ವರಂನಲ್ಲಿ ಚಿನ್ನ, ನಗದು ಸೇರಿದಂತೆ 25.45 ಕೋಟಿ ರೂ. ಅನ್ನು ಜಪ್ತಿ ಮಾಡಿದೆ.

ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಹೆಚ್ಚಿನ ದೂರುಗಳು ಅನುಮತಿಯಿಲ್ಲದೆ ಬ್ಯಾನರ್ / ಪೋಸ್ಟರ್‌ಗಳನ್ನು ಹಾಕುವ ಬಗ್ಗೆ ಮತ್ತು ಉಳಿದವು ಉಡುಗೊರೆ, ಹಣ, ಮದ್ಯ ಮತ್ತು ಆಸ್ತಿ ವಿರೂಪಗೊಳಿಸುವಿಕೆಯ ಬಗ್ಗೆ ದೂರುಗಳಾಗಿವೆ. ಫ್ಲೈಯಿಂಗ್ ಸ್ಕ್ವಾಡ್‌ಗಳು ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಅಮೂಲ್ಯ ಲೋಹಗಳು ಮತ್ತು ಉಚಿತ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ 1,334 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಚಿನ್ನ, ನಗದು ಸೇರಿದಂತೆ 25.45 ಕೋಟಿ ರೂ. ಬೆಂಗಳೂರಿನ ದಾಸರಹಳ್ಳಿ, ಶಿವಾಜಿನಗರ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಬಿಟಿಎಂ ಲೇಔಟ್ ಮತ್ತು ಮಲ್ಲೇಶ್ವರಂನಲ್ಲಿ ಹೆಚ್ಚಿನ ಜಪ್ತಿ ಮಾಡಲಾಗಿದೆ.

ಕಾರ್ಕಳ 50 ಲಕ್ಷ ರೂ. ನಗದು ಜಪ್ತಿ
ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ನಗದನ್ನು ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಚೆಕ್‌ಪೋಸ್ಟ್‌ ಪೊಲೀಸರು ನಿನ್ನೆ (ಏ.15)ರಂದು ಜಪ್ತಿ ಮಾಡಿದ್ದರು. ದಾಖಲೆ ಇಲ್ಲದೆ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿದ್ದರು. ಚುನಾವಣಾಧಿಕಾರಿ ಮದನ್ ಮೋಹನ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಬ್ಯಾಂಕ್‌ ಲೆಟರ್ ವಶಪಡಿಸಿಕೊಂಡಿದ್ದರು. ಸಾಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT