ಭಾರತೀಯ ಚುನಾವಣಾ ಆಯೋಗದ ಸಾಂದರ್ಭಿಕ ಚಿತ್ರ 
ರಾಜ್ಯ

ನ್ಯಾಯಸಮ್ಮತ ಚುನಾವಣೆಗಾಗಿ 10 ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ "ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ" ಪೊಲೀಸ್ ಉಪ ಆಯುಕ್ತ ಸೇರಿದಂತೆ 10 ಪೊಲೀಸ್ ಅಧಿಕಾರಿಗಳನ್ನು...

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ "ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ" ಪೊಲೀಸ್ ಉಪ ಆಯುಕ್ತ ಸೇರಿದಂತೆ 10 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ ಎಂದು ಚುನಾವಣಾ ಆಯೋಗದ ಮೂಲಗಳು ಸೋಮವಾರ ತಿಳಿಸಿವೆ.

ಡಿಸಿಪಿ(ಉತ್ತರ) ಬೆಂಗಳೂರು, ಯಶವಂತಪುರ ಮತ್ತು ಬೆಂಗಳೂರಿನ ಎಸಿಪಿ ಹಾಗೂ ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು - ರಾಜರಾಜೇಶ್ವರಿ ನಗರ, ಯಶವಂತಪುರ, ನಂದಿನಿ ಲೇಔಟ್ ಪೊಲೀಸ್ ಠಾಣೆ ಮತ್ತು ರಾಜಗೋಪಾಲ್ ನಗರ ಪೊಲೀಸ್ ಠಾಣೆಯ ತಲಾ ಒಬ್ಬರು ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಗೊಂಡಿರುವ ಅಧಿಕಾರಿಗಳನ್ನು ರಾಜ್ಯ ಸಚಿವರೊಬ್ಬರ ಇಚ್ಛೆಯ ಮೇರೆಗೆ ನಿಯೋಜಿಸಲಾಗಿದೆ ಮತ್ತು ಅವರ ವರ್ಗಾವಣೆಯಿಂದ ಮೇ 10ರಂದು ನಡೆಯುವ ಚುನಾವಣೆಯ ನೀತಿ ಸಂಹಿತೆಯನ್ನು "ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು" ಸಹಾಯ ಮಾಡುತ್ತದೆ ಎಂದು ಭಾವಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

"ಇದಕ್ಕೆ ಪ್ರತಿಯಾಗಿ ಯಾವುದೇ ದೂರು ದಾಖಲಾಗಿಲ್ಲ. ಹೀಗಾಗಿ ಚುನಾವಣೆಯನ್ನು ಉತ್ತಮವಾಗಿ ನಡೆಸಲು ಆಯೋಗ ಈ ನಿರ್ಧಾರವನ್ನು ತೆಗೆದುಕೊಂಡಿದೆ" ಎಂದು ಕಾರ್ಯಕಾರಿಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆಯ ನಂತರ, ಪರಿಸ್ಥಿತಿಯನ್ನು ಅಸಮರ್ಪಕವಾಗಿ ನಿಭಾಯಿಸಿದ್ದಕ್ಕಾಗಿ ಸ್ಥಳೀಯ ಡಿಎಸ್ಪಿ ಮತ್ತು ಒಬ್ಬ ಸರ್ಕಲ್ ಇನ್ಸ್‌ಪೆಕ್ಟರ್ ನ್ನು ವರ್ಗಾವಣೆ ಮಾಡಿ ಇಸಿ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ