ಬಿ.ಎಲ್ ಸಂತೋಷ್ 
ರಾಜ್ಯ

ಅಸಮಾಧಾನ ಮರೆತು ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಿ: ಕಾರ್ಯಕರ್ತರಿಗೆ ಬಿ.ಎಲ್ ಸಂತೋಷ್ ಕರೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಭಾನುವಾರ ಭವಿಷ್ಯ ನುಡಿದಿದ್ದಾರೆ.

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಭಾನುವಾರ ಭವಿಷ್ಯ ನುಡಿದಿದ್ದಾರೆ.

ಸಂತೋಷ್ ಮಂಗಳೂರು ಉತ್ತರ ಕ್ಷೇತ್ರದ ಚುನಾವಣಾ ಕಚೇರಿಯನ್ನು ಉದ್ಘಾಟಿಸಿದರು. ಆದರೆ, ರಾಜ್ಯ ರಾಜಕೀಯದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಧ್ಯಮದವರ ಪ್ರಶ್ನೆಗೆ, ಉತ್ತರಿಸಿದ ಅವರು, ಈ ಬಾರಿ ಚುನಾವಣೆಯಲ್ಲಿ ನಾವು ಉತ್ತಮ ಪ್ರದರ್ಶನ ತೋರುತ್ತೇವೆ ಎಂದು ಸಂತೋಷ್ ಭರವಸೆ ವ್ಯಕ್ತ ಪಡಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

ಬಿಜೆಪಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಸಂತೋಷ್ ಕರೆ ನೀಡಿದರು. ಭರವಸೆಗಳನ್ನು ಈಡೇರಿಸಲು ಹಣ ಹೇಗೆ ಸಿಗುತ್ತದೆ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಬೇಕು. ನಮ್ಮ ಅವಧಿಯಲ್ಲಿ ರಾಜ್ಯ ಅಭಿವೃದ್ಧಿ ಕಂಡಿದೆ, ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಬಳಿಗೆ ತೆರಳಿ ಮತ ಕೇಳಲು ಹಿಂಜರಿಕೆ ಇಲ್ಲ ಎಂದಿದ್ದಾರೆ.

ಅಭ್ಯರ್ಥಿಗಳ ಬದಲಾವಣೆಯಿಂದ ಒಂದೆರಡು ಕ್ಷೇತ್ರದಲ್ಲಿ ಕೆಲವರಿಗೆ ಅಸಮಾಧಾನ ಆಗಿರಬಹುದು. ಅದನ್ನು ಚುನಾವಣೆಯ ಮುಖ್ಯ ವಿಷಯವನ್ನಾಗಿಸದೆ ಆದಷ್ಟು ಬೇಗ ಪೂರ್ಣ ಪ್ರಮಾಣದಲ್ಲಿ ಚುನಾವಣೆಗೆ ಧುಮುಕಿ 2018ರ ಮಾದರಿಯಲ್ಲೇ ಈ ಬಾರಿಯೂ ಎಲ್ಲ ಕ್ಷೇತ್ರಗಳಲ್ಲಿ ಗೆಲುವಿಗೆ ಶ್ರಮಿಸಬೇಕು ಎಂಬ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ