ರಾಜ್ಯ

ವಿಧಾನಸಭಾ ಚುನಾವಣೆ: ಮತದಾರರ ನಾಡಿಮಿಡಿತ ಅರಿಯಲು ಸರಣಿ ಸಭೆ ನಡೆಸಿದ ಸಿದ್ದರಾಮಯ್ಯ!

Manjula VN

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದ ರಾಜಕೀಯ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ವಿ ಸೋಮಣ್ಣ ಇಬ್ಬರ ಸ್ಪರ್ಧೆಯಿಂದ ಕದನ ಕಣದ ಕಾವು ಜೋರಿದೆ.

ವರುಣಾದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮತದಾರರ ನಾಡಿಮಿಡಿತ ಅರಿಯಲು ಹಾಗೂ ಕ್ಷೇತ್ರದ ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯೆ ಪಡೆಯಲು ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಮಂಗಳವಾರ ಸರಣಿ ಸಭೆಗಳ ನಡೆಸಿದರು.

ಜಾತಿರೇಖೆಗಳ ಬದಿಗೊತ್ತಿ ಸಿದ್ದರಾಮಯ್ಯ ನಿವೃತ್ತ ನೌಕರರು, ಯುವಕರು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ಸಭೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಒತ್ತಿ ಹೇಳಿದರು.

ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ಅವರು, ಬಿಜೆಪಿಗೆ 60ಕ್ಕಿಂತ ಹೆಚ್ಚು ಸ್ಥಾನ ಬರುವುದಿಲ್ಲ ಎಂದು ಹೇಳಿದರು.

ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರನ್ನು ಬಿಜೆಪಿ ನಿರ್ಲಕ್ಷಿಸಿದ್ದು, ಈ ಬೆಳವಣಿಗೆ ಕೇಸರಿ ಪಕ್ಷದ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇರುವುದೇ ಆದರೆ, ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ಎ ರಾಮದಾಸ್‌ ಅವರಿಗೆ ಪಕ್ಷಕ್ಕೆ ಸ್ವಾಗತಿಸುತ್ತೇವೆಂದು ಹೇಳಿದರು.

ವಸತಿ ಸಚಿವ ವಿ.ಸೋಮಣ್ಣ ಅವರನ್ನು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಬಲವಂತ ಮಾಡಲಾಗಿದೆ. ವರುಣಾ ಭಾಗದಲ್ಲಿ ಸೋಮಣ್ಣ ಹೊರಗಿನವರು. ಅವರನ್ನು ಬಲಿಪಶು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಸಿದ್ದರಾಮಯ್ಯ ಅವರ ಮೊಮ್ಮಗ ದವನ್ ರಾಕೇಶ್ ಅವರು, ತಮ್ಮ ತಾತನ ಜೊತೆಗೂಡಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಮೊಮ್ಮಗ ರಾಜಕೀಯದಲ್ಲಿ ಆಸಕ್ತಿ ತೋರಿದ್ದಾನೆ. ಚುನಾವಣಾ ಪ್ರಕ್ರಿಯೆ ಹಾಗೂ ಇತರೆ ವಿಧಿವಿಧಾನಗಳ ಬಗ್ಗೆ ತಿಳಿದುಕೊಳ್ಳಲು ಬಯಸಿದ್ದಾನೆ. “ನನ್ನ ಮೊಮ್ಮಗ ತನ್ನ ತಂದೆ ರಾಕೇಶ್ ಅವರಂತೆ ರಾಜಕೀಯದಲ್ಲಿ ಆಸಕ್ತಿ ತೋರಿಸಿರುವುದು ನನಗೆ ಖುಷಿ ತಂದಿದೆ. ಆದರೆ, ಅವನಿಗೆ ಕೇವಲ 17 ವರ್ಷವಾಗಿದ್ದು, ರಾಜಕೀಯ ಪಾದಾರ್ಪಣೆಗೆ ಇನ್ನೂ ಹಲವು ವರ್ಷಗಳಿವೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

SCROLL FOR NEXT