ತೇಜಸ್ವಿನಿ ಅನಂತ್ ಕುಮಾರ್ 
ರಾಜ್ಯ

ಒಂದು ಗಿಡ-ನೂರೊಂದು ಅರ್ಥ: ಚರ್ಚೆಗೆ ಕಾರಣವಾಯ್ತು ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ಪತಿ ಅನಂತಕುಮಾರ್‌ ಅವರು ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ಪತಿ ಅನಂತಕುಮಾರ್‌ ಅವರು ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

2015ರ ಜೂನ್‌ 5ರಂದು ಲಾಲ್‌ಬಾಗ್‌ ಪಶ್ಚಿಮ ದ್ವಾರದ ಬಳಿ ಅನಂತಕುಮಾರ್‌ ಅವರು ಈ ಗಿಡ ನೆಟ್ಟಿದ್ದರು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್‌ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಅನಂತಕುಮಾರ ಅವರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು ಎಂಬುದು ನನ್ನ ಭಾವನೆ’ ಎಂದಿದ್ದಾರೆ.

ತೇಜಸ್ವಿನಿ ಅವರು ವಿಧಾನಸಭಾ ಚುನಾವಣೆ ಟಿಕೆಟ್‌ ಆಕಾಂಕ್ಷಿಯಾಗಿದ್ದರು ಆದರೆ, ಅವರಿಗೆ ಟಿಕೆಟ್‌ ತಪ್ಪಿರುವುದರಿಂದ ತಮ್ಮ ವೇದನೆಯನ್ನು ಸೂಚ್ಯವಾಗಿ ಈ ರೀತಿ ವ್ಯಕ್ತಪಡಿಸಿರಬಹುದು ಎಂಬ ಚರ್ಚೆ ನಡೆಯುತ್ತಿದೆ. ಈ ಟ್ವೀಟ್‌ ಮಾಡುವುದಕ್ಕೂ ಮುನ್ನ ಅವರು, 'ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?' ಎಂದು ಟ್ವೀಟ್‌ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT