ಬಿಜೆಪಿ ಸಮಾವೇಶ 
ರಾಜ್ಯ

ಶಿಗ್ಗಾಂವಿಯಲ್ಲಿ ಬಿಜೆಪಿ ಸಮಾವೇಶ: ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ, ನಟ ಸುದೀಪ್ ಭಾಗಿ

ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾ ನಾಮಪತ್ರ ಸಲ್ಲಿಸಿದರು.

ಶಿಗ್ಗಾವಿ (ಹಾವೇರಿ): ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಬೃಹತ್ ಸಮಾವೇಶವನ್ನು ನಡೆಸಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ನಟ ಕಿಚ್ಚ ಸುದೀಪ್ ಅವರು ಸಾಥ್ ನೀಡಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಚಿತ್ರನಟ ಸುದೀಪ್ ಆಗಮನದ ಹಿನ್ನೆಲೆಯಲ್ಲಿ ಸಹಸ್ರಾರು ಜನರು ಪಟ್ಟಣದ ಕಿತ್ತೂರು ಚನ್ನಮ್ಮ ಸರ್ಕಲ್ ನಲ್ಲಿ ನೆರೆದಿದ್ದರು.

ಮೊದಲಿಗೆ ಕಿತ್ತೂರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ರೋಡ್ ಶೋಗೆ ಚಾಲನೆ ನೀಡಲಾಯಿತು.

ತಾಲ್ಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಬಹಿರಂಗ ಸಮಾವೇಶ ನಡೆಯಿತು., ಮಧ್ಯಾಹ್ನ 1.30ಕ್ಕೆ ತಹಶೀಲ್ದಾರ್ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಸಲಿದರು. ಮೆರವಣಿಗೆಯಲ್ಲಿ ಜಗ್ಗಲಿಗೆ ತಂಡ, ಜನಪದ ಕಲಾ ತಂಡಗಳು ಗಮನ ಸೆಳೆಯಿತು.

ಸುಡು ಬಿಸಿಲನ್ನು ಲೆಕ್ಕಿಸದೆ ಜನರು ಕಿಚ್ಚ ಸುದೀಪ್ ನೋಡಲು ಬಂದಿದ್ಜರು. ಈ ವೇಳೆ ಸಚಿವರಾದ ಬಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ