ಜೆಪಿ ನಡ್ಡಾ 
ರಾಜ್ಯ

ಕರ್ನಾಟಕ ಚುನಾವಣೆ: 'ಕಾಂಗ್ರೆಸ್ ಎಂದರೆ ಕಮಿಷನ್, ಭ್ರಷ್ಟಾಚಾರ, ಅಪರಾಧೀಕರಣ' ಎಂದು ಜೆಪಿ ನಡ್ಡಾ ವಾಗ್ದಾಳಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಳೆಯ ಪಕ್ಷವಾದ ಕಾಂಗ್ರೆಸ್ ಎಂದರೆ 'ಕಮಿಷನ್, ಭ್ರಷ್ಟಾಚಾರ ಮತ್ತು ಅಪರಾಧೀಕರಣ' ಎಂದು ಆರೋಪಿಸಿದರು.

ಶಿಗ್ಗಾಂವಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಳೆಯ ಪಕ್ಷವಾದ ಕಾಂಗ್ರೆಸ್ ಎಂದರೆ 'ಕಮಿಷನ್, ಭ್ರಷ್ಟಾಚಾರ ಮತ್ತು ಅಪರಾಧೀಕರಣ' ಎಂದು ಆರೋಪಿಸಿದರು.

ರಾಜ್ಯವು 'ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತವಾಗಬಾರದು' ಎಂದು ತಿಳಿಸಿದ ಅವರು, ಬಿಜೆಪಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದರು. ಕಾಂಗ್ರೆಸ್ ಎಂದರೆ ಕಮಿಷನ್, ಭ್ರಷ್ಟಾಚಾರ ಮತ್ತು ಅಪರಾಧೀಕರಣ. ಅಭಿವೃದ್ಧಿಗಾಗಿ ಮತ ನೀಡುವಂತೆ ಎಲ್ಲರಿಗೂ ಮನವಿ ಮಾಡಲು ನಾನು ಇಲ್ಲಿದ್ದೇನೆ ಎಂದರು.

ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಟ ಕಿಚ್ಚ ಸುದೀಪ್ ಭಾಗವಹಿಸಿದ್ದ ಸಾರ್ವಜನಿಕ ಸಭೆಯಲ್ಲಿ ನಡ್ಡಾ ಮಾತನಾಡಿದರು. ಬೊಮ್ಮಾಯಿ ಇಂದು ಶಿಗ್ಗಾಂವಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

‘ಕಮಲ’ವನ್ನು ಗೆಲ್ಲಿಸಿ, ಬಿಜೆಪಿಯನ್ನು ಗೆಲ್ಲಿಸಿ ಎಂದು ನಿಮ್ಮೆಲ್ಲರನ್ನೂ ಕೋರುತ್ತೇನೆ!. ಕರ್ನಾಟಕವು ಮೋದಿಯವರ ಆಶೀರ್ವಾದದಿಂದ ವಂಚಿತವಾಗಬಾರದು ಮತ್ತು ಅಭಿವೃದ್ಧಿಯ ಓಟದಲ್ಲಿ ಎಂದಿಗೂ ಹಿಂದೆ ಉಳಿಯಬಾರದು. ಇದನ್ನು, ನೀವೆಲ್ಲರೂ ಕೇವಲ 'ಕಮಲ'ವನ್ನು ಆಯ್ಕೆ ಮಾಡುವ ಮೂಲಕ ಖಚಿತಪಡಿಸಿಕೊಳ್ಳಬೇಕು' ಎಂದು ನಡ್ಡಾ ಹೇಳಿದರು.

ಇಂದು ಮುಖ್ಯಮಂತ್ರಿ ಬೊಮ್ಮಾಯಿ ಸಲ್ಲಿಸಲಿರುವ ನಾಮಪತ್ರವು ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯುವ ವಿಧಾನವಾಗಿದೆ. ಈ ನಾಮಪತ್ರವು ಕೇವಲ ಶಾಸಕರಿಗಷ್ಟೇ ಅಲ್ಲ, ಕರ್ನಾಟಕವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗವಾಗಿದೆ ಎಂದು ತಿಳಿಸಿದರು.

ಮುಂದಿನ ಐದು ವರ್ಷಗಳ ಕಾಲ ಬೊಮ್ಮಾಯಿ ಜೀ ಅವರನ್ನು ಮರಳಿ ಕರೆತರಲು ನೀವೆಲ್ಲರೂ ನಿರ್ಧರಿಸಿದ್ದೀರಿ ಎಂಬುದನ್ನು ಇಲ್ಲಿನ ಜನಸಮೂಹದಲ್ಲಿರುವ ಉತ್ಸಾಹವೇ ತೋರಿಸುತ್ತದೆ. ಕರ್ನಾಟಕದ ಪ್ರತಿಯೊಂದು ಮೂಲೆಯಲ್ಲಿಯೂ ಅಭಿವೃದ್ಧಿ ನುಸುಳುವುದನ್ನು ಖಚಿತಪಡಿಸಿಕೊಳ್ಳಲು, ನೀವು ಬಿಜೆಪಿಗೆ ಮತ ಹಾಕಬೇಕು ಎಂದು ಅವರು ಹೇಳಿದರು.

ಬಿಜೆಪಿ ನೇತೃತ್ವದ ಸರ್ಕಾರದ ಧ್ಯೇಯವಾಕ್ಯವೆಂದರೆ ಅಭಿವೃದ್ಧಿಯನ್ನು ಖಚಿತಪಡಿಸುವುದು. ಬಿಜೆಪಿ ನಾಯಕತ್ವದಲ್ಲಿ ಕರ್ನಾಟಕವು ಸಮೃದ್ಧಿಯತ್ತ ದಾಪುಗಾಲು ಹಾಕಿದೆ. ಸಮಾಜದ ಪ್ರತಿಯೊಂದು ವರ್ಗದ ಕಲ್ಯಾಣವನ್ನು ಖಾತ್ರಿಪಡಿಸುವ ಮೂಲಕ, ಇದು ದೇಶದ ಅಗ್ರ ಎಫ್‌ಡಿಐ ತಾಣವಾಗಿದೆ ಎಂದು ಹೇಳಿದರು.

ನಡ್ಡಾ ಅವರು ತಮ್ಮ ಭಾಷಣಕ್ಕೂ ಮುನ್ನ ಶಿಗ್ಗಾಂವ್ ಜಿಲ್ಲೆಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ಸಿಎಂ ಬೊಮ್ಮಾಯಿ, ಕನ್ನಡ ನಟ ಕಿಚ್ಚ ಸುದೀಪ್ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ರೋಡ್‌ ಶೋ ವೇಳೆ ಜನರು ಕಿಕ್ಕಿರಿದು ರಸ್ತೆಗಳಲ್ಲಿ ನಿಂತಿದ್ದರು, ಬಿಜೆಪಿ ಧ್ವಜವನ್ನು ಬೀಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT