ರಾಜ್ಯ

ವಿಧಾನಸಭಾ ಚುನಾವಣೆ: ನಗರದಲ್ಲಿ ಈ ಬಾರಿ 1.35 ಲಕ್ಷ ಮೊದಲ ಬಾರಿಯ ಮತದಾರರು!

Manjula VN

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮೇ.10 ರಂದು ನಡೆಯಲಿದ್ದು, ಮೇ.13 ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿಯ ಮತದಾನ ಪ್ರಮಾಣವನ್ನು ಏರಿಕೆ ಮಾಡಲು ಬಿಬಿಎಂಪಿ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ.

ಕಳೆದ ಬಾರಿ ಶೇ 55ರಷ್ಟಿದ್ದ ಮತದಾನದ ಪ್ರಮಾಣವನ್ನು ಈ ಬಾರಿ ಕನಿಷ್ಠ ಶೇ 75ಕ್ಕೆ ಏರಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರೀಸ್ ಅಂಡ್ ಕಾಮರ್ಸ್ (ಬಿಸಿಐಸಿ) ನಗರದಲ್ಲಿ ಬುಧವಾರ ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಮತದಾನ ಪ್ರಮಾಣ ಶೇ.100ರಷ್ಟು ಇರಬೇಕು. ಈ ನಿಟ್ಟಿನಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ, ಇದಕ್ಕಾಗಿಯೇ ಎಲ್ಲಾ ಕ್ಷೇತ್ರಗಳಲ್ಲೂ ಪ್ರತ್ಯೇಕವಾಗಿ ಭೇಟಿ ನೀಡಿ ಮತದಾರರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

“ಈ ಬಾರಿ 18-19 ವರ್ಷ ವಯಸ್ಸಿನ 1.35 ಲಕ್ಷ ಮತದಾರರಿದ್ದು, ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. 2023ರ ಜನವರಿಯಿಂದ ಒಟ್ಟು ಐದು ಲಕ್ಷ ಮತದಾರರು ಸೇರ್ಪಡೆಗೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಮತದಾರರು ನೈಜ-ಸಮಯದ ಮಾಹಿತಿಯನ್ನು ಪಡೆಯಲು ಕ್ಯೂ ಅಪ್ಲಿಕೇಶನ್ ಮತ್ತು ಪಾರ್ಕಿಂಗ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸುವಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಚುನಾವಣೆಗೆ ಒಂದು ದಿನ ಮೊದಲು ಎಲ್ಲಾ ಅರ್ಹ ಮತದಾರರಿಗೆ ಎಸ್‌ಎಂಎಸ್ ಕಳುಹಿಸಲು, ಮತ ಚಲಾಯಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ. ಮತದಾರರ ವಿವರಗಳು, ಕ್ರಮ ಸಂಖ್ಯೆಗಳು ಮತ್ತು ಮತಗಟ್ಟೆ ವಿವರಗಳೊಂದಿಗೆ ವೋಟರ್ ಸ್ಲಿಪ್ ಅನ್ನು ಚುನಾವಣೆಗೆ 10 ದಿನಗಳ ಮೊದಲು ಕಳುಹಿಸಲಾಗುವುದು ಎಂದು ಹೇಳಿದರು.

SCROLL FOR NEXT