ಸಂಗ್ರಹ ಚಿತ್ರ 
ರಾಜ್ಯ

ರೈಲಿನಲ್ಲಿ ಗಾಂಜಾ ತಂದು ನಗರದಲ್ಲಿ ಮಾರಾಟ: ನಾಲ್ವರು ಆರೋಪಿಗಳ ಬಂಧನ

ರೈಲಿನಲ್ಲಿ ಗಾಂಜಾ ತಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಹಲವು ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ರೈಲಿನಲ್ಲಿ ಗಾಂಜಾ ತಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಹಲವು ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರಂಭದಲ್ಲಿ ಪೊಲೀಸರು ಮಂಜುನಾಥ್ ಎಂಬಾತನನ್ನು ಬಂಧನಕ್ಕೊಳಪಡಿಸಿದ್ದರು. ನಂತರ ಆತನನ್ನು ವಿಚಾರಣೆಗೊಳಪಡಿಸಿದ ಬಳಿಕ ಆತ ನೀಡಿದ ಮಾಹಿತಿ ಮೇರೆಗೆ ಮತ್ತೆ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಹೊಸಕೋಟೆ ಮೂಲದ ಮುನಿಯಪ್ಪ, ಒಡಿಶಾ ಮೂಲದ ನಿರಂಜನ್ ಪ್ರಧಾನ್ ಮತ್ತು ಫಕೀರ್ ದಳಪತಿ ಎಂದು ಗುರುತಿಸಲಾಗಿದೆ.

ಪ್ರಧಾನ್ ಮತ್ತು ದಳಪತಿ ಗಾಂಜಾವನ್ನು ರೈಲುಗಳ ಮೂಲಕ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ತನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

SCROLL FOR NEXT