ಡಿಕೆ.ಶಿವಕುಮಾರ್ 
ರಾಜ್ಯ

ನಾಮಪತ್ರ ಅಂಗೀಕಾರ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರಕ್ಕೆ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ರಾಮನಗರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರಕ್ಕೆ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ. ಹೀಗಾಗಿ  ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರವನ್ನು ಕನಕಪುರ ಚುನಾವಣಾಧಿಕಾರಿ ಮಾನ್ಯ ಮಾಡಿದ್ದಾರೆ.

ಆಸ್ತಿ ಹಾಗೂ ತೆರಿಗೆ ಲೆಕ್ಕಾಚಾರ ಸಮಸ್ಯೆಯಿಂದಾಗಿ ನಾಮಪತ್ರ ತಿರಸ್ಕೃತವಾಗುತ್ತದೆ ​ಎನ್ನುವ ಆತಂಕ ಡಿಕೆ.ಶಿವಕುಮಾರ್ ಅವರಿಗೆ ಎದುರಾಗಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ತಮ್ಮ ಸಹೋದರ ಡಿಕೆ.ಸುರೇಶ್ ಅವರಿಂದಲೂ ಕೊನೆ ಗಳಿಗೆಯಲ್ಲಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವಂತೆ ಮಾಡಿದ್ದರು.

ಏಪ್ರಿಲ್ 24 ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಅಂದು ಡಿಕೆ ಸುರೇಶ್ ಅವರು ತಾವು ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

ಜಪಾನ್ ವಿರುದ್ಧ ಗೋಲ್ಡನ್ ಡಕ್; Unwanted Record ಸೃಷ್ಟಿಸಿದ ಅಭಿಷೇಕ್ ಶರ್ಮಾ: ಈ ದಾಖಲೆ ಮುರಿಯುವುದು ಯಾರಿಗೂ ಅಸಾಧ್ಯ!

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭರ್ಥಿ ಮಾಡಿ, ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!