ವಿನಯ್ ಕುಲಕರ್ಣಿ 
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಮನವಿ; ಸಿಬಿಐಗೆ ಹೈಕೋರ್ಟ್ ನೋಟಿಸ್!

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಧಾರವಾಡ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡದಲ್ಲಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಧಾರವಾಡ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡದಲ್ಲಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

‘ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕಾರಣ 50 ದಿನಗಳ ಕಾಲ ಧಾರವಾಡ ಜಿಲ್ಲೆಯಲ್ಲಿ ಇರಲು ಅನುಮತಿ ನೀಡಬೇಕು’ ಎಂದು ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ ಗೌಡರ್‌ ಕೊಲೆ ಪ್ರಕರಣದ 15ನೇ ಆರೋಪಿಯಾಗಿರುವ ವಿನಯ ಕುಲಕರ್ಣಿ ಸಲ್ಲಿಸಿರುವ ಎರಡು ಕ್ರಿಮಿನಲ್‌ ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. 

ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ.ಎಚ್ ಜಾಧವ್, ‘ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಅರ್ಜಿದಾರರಿಗೆ, ಧಾರವಾಡ ಪ್ರವೇಶಿಸದಂತೆ ನ್ಯಾಯಾಲಯ ಷರತ್ತು ವಿಧಿಸಿದೆ. ಆದರೆ, ಸದ್ಯ ಚುನಾವಣೆಗೆ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ 50 ದಿನ ಧಾರವಾಡದಲ್ಲಿ ಇರಲು ಅನುಮತಿ ನೀಡುವಂತೆ ಅರ್ಜಿದಾರರು ಕೋರಿದ್ದ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ’ ಎಂದು ವಿವರಿಸಿದರು. 

ಇಂದು ವಿಚಾರಣೆ
ಇನ್ನು ಕರ್ನಾಟಕ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಏ.21 ಅಂದರೆ ಶುಕ್ರವಾರಕ್ಕೆ ಮುಂದೂಡಿದ್ದು, ಇಂದು ಪೀಠದಲ್ಲಿ ಮಹತ್ತರ ವಿಚಾರಣೆ ನಡೆಯುವ ಸಾಧ್ಯತೆ ಇದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

ವೈಭವ್ ಸೂರ್ಯವಂಶಿಗೆ ಬಂಪರ್ ಆಫರ್: ಜಾರ್ಖಂಡ್ ಆರೋಗ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಥವಾ ಗೋಹತ್ಯೆ ನಿಷೇಧಿಸುವ ಯಾವುದೇ ಪ್ರಸ್ತಾಪವಿಲ್ಲ: ಕೇಂದ್ರ ಸಚಿವ

SCROLL FOR NEXT