ನಂದಿ ಬೆಟ್ಟ 
ರಾಜ್ಯ

ಪ್ರವಾಸಿಗರೇ ಗಮನಿಸಿ: ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ, ಹೊಸ ವೇಳಾಪಟ್ಟಿ ಇಂತಿದೆ!

ಕರ್ನಾಟಕದ ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ವೇಳಾಪಟ್ಟಿ ಪರಿಷ್ಕರಣೆ ಮಾಡಿ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕದ ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ವೇಳಾಪಟ್ಟಿ ಪರಿಷ್ಕರಣೆ ಮಾಡಿ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ.

ಬೇಸಿಗೆ ಹಿನ್ನಲೆಯಲ್ಲಿ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಸಿದ್ಧ ನಂದಿಗಿರಿಧಾಮದ ಪ್ರವೇಶದ ಅವಧಿಯನ್ನು ಪರಿಷ್ಕರಿಸಲಾಗಿದೆ. ಬೆಳಿಗ್ಗೆ 5ರಿಂದ ಸಂಜೆ 7ರವರೆಗೆ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ತಿಳಿಸಿದ್ದಾರೆ. 

ಈ ಹಿಂದೆ ಬೆಳಿಗ್ಗೆ 5.30 ರಿಂದ ಸಂಜೆ 6ರವರೆಗೆ ಪ್ರವೇಶಕ್ಕೆ ಅವಕಾಶವಿತ್ತು. ಬೇಸಿಗೆ ರಜೆ ಪ್ರಾರಂಭವಾಗುತ್ತಿದೆ. ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆಗಾಗಿ ಪ್ರವಾಸಿಗರಿಗೆ ಹೆಚ್ಚಿನ ಕಾಲಾವಕಾಶ ಒದಗಿಸುವ ನಿಟ್ಟಿನಲ್ಲಿ ಮತ್ತು ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣಾಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಸಮಯ ವಿಸ್ತರಿಸಲಾಗಿದೆ ಎಂದರು. ಈ ವಿಸ್ತರಣೆ ಸೆಪ್ಟೆಂಬರ್ 30ರವರೆಗೆ ಅನ್ವಯ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT