ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ 
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಕೆಎಸ್ ಈಶ್ವರಪ್ಪಗೆ ಪ್ರಧಾನಿ ಮೋದಿ ಕರೆ; ಪಕ್ಷಕ್ಕೆ ಬದ್ಧತೆ ಬಗ್ಗೆ ಮೆಚ್ಚುಗೆ!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪರಿ ವಿಚಾರಿಸಿದ್ದಾರೆ.

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪರಿ ವಿಚಾರಿಸಿದ್ದಾರೆ.

ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಲು ಪಕ್ಷ ಸೂಚಿಸುತ್ತಿದ್ದಂತೆ ಪಕ್ಷದ ಆದೇಶವನ್ನು ಈಶ್ವರಪ್ಪ ಪಾಲನೆ ಮಾಡಿದ್ದರು. ರಾಜಕೀಯ ನಿವೃತ್ತಿ ಘೋಷಣೆ ಮಾಡಿದರು. ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್‍ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ.

ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದಿದ್ದು, ಇದೇ ಕಾರಣಕ್ಕೆ ಸ್ವತಃ ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದರು. ಈ ವೇಳೆ ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದು, ಈ ವೇಳೆ ಈಶ್ವರಪ್ಪ ಮಾತನಾಡಿ, ಸಾಮಾನ್ಯ ಕಾರ್ಯಕರ್ತರೊಂದಿಗೆ ಈ ರೀತಿ ಮಾತನಾಡುತ್ತಿರುವುದು ಸಂತೋಷ ತಂದಿದೆ. ಸಂಘಟನೆ ಹಾಗೂ ನಿಮ್ಮನೊಂದಿಗೆ ಸದಾ ನಾನು ಇರುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು. 

ನೀವು ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿ ಆಯ್ತು. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT