ಎ. ರವೀಂದ್ರಪ್ಪ 
ರಾಜ್ಯ

ಚಿತ್ರದುರ್ಗ: ಎಚ್.ಡಿ ರೇವಣ್ಣ ಆಪ್ತ, ಹಿರಿಯೂರು ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ

ಕಾವೇರಿದ ಚುನಾವಣೆಯ ವಾತಾವರಣದಲ್ಲಿ ಇರುವ ಜೆಡಿಎಸ್ ಅಭ್ಯರ್ಥಿಯೊಬ್ಬರಿಗೆ ಆದಾಯ ತೆರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಅಭ್ಯರ್ಥಿಯ ಮನೆ ಮೇಲೆ ದಾಳಿ ಮಾಡಿದ್ದಾರೆ.

ಚಿತ್ರದುರ್ಗ: ಕಾವೇರಿದ ಚುನಾವಣೆಯ ವಾತಾವರಣದಲ್ಲಿ ಇರುವ ಜೆಡಿಎಸ್ ಅಭ್ಯರ್ಥಿಯೊಬ್ಬರಿಗೆ ಆದಾಯ ತೆರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಅಭ್ಯರ್ಥಿಯ ಮನೆ ಮೇಲೆ ದಾಳಿ ಮಾಡಿದ್ದಾರೆ.

ಹಿರಿಯೂರು ಜೆಡಿಎಸ್​​ ಅಭ್ಯರ್ಥಿ ಗೊಲ್ಲಹಳ್ಳಿ ಗ್ರಾಮದ ರವೀಂದ್ರಪ್ಪ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಡರಾತ್ರಿ ರವಿಂದ್ರಪ್ಪ ಸಂಬಂಧಿ ನಾಗರಾಜ್ ನಿವಾಸದ ಮೇಲೂ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ತಡರಾತ್ರಿ 2 ಗಂಟೆವರೆಗೂ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಧರ್ಮಪುರ ಹೋಬಳಿಯ ಮುಂಗುಸುವಳ್ಳಿ ಗ್ರಾಮದ ತೋಟದ ಮನೆಗೆ ಮಧ್ಯಾಹ್ನ 1.30ಕ್ಕೆ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಭೇಟಿ ನೀಡಿತು. ರವೀಂದ್ರಪ್ಪ ಅವರು ಚುನಾವಣಾ ಪ್ರಚಾರಕ್ಕೆ ತೆರಳಿದ್ದರಿಂದ ಕಾಯುತ್ತ ಕುಳಿತರು. ಸಂಜೆ 4.30ಕ್ಕೆ ಅಭ್ಯರ್ಥಿ ಮನೆಗೆ ಧಾವಿಸಿದ ಬಳಿಕ ಶೋಧ ಕಾರ್ಯ ಆರಂಭವಾಗಿದೆ.

ದಾವಣಗೆರೆ, ಬೆಂಗಳೂರು ಹಾಗೂ ಮೈಸೂರಿನ ಅಧಿಕಾರಿಗಳು ತಂಡದಲ್ಲಿದ್ದಾರೆ. ತೋಟದ ಮನೆಯ ಕೆಲಸಗಾರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ರವೀಂದ್ರಪ್ಪ ಹಾಗೂ ಕುಟುಂಬದ ಸದಸ್ಯರಿಗೆ ಮನೆಯಲ್ಲಿ ದಿಗ್ಬಂಧನ ಹೇರಲಾಗಿದೆ. ಎರೆಹುಳು ಗೊಬ್ಬರದ ಶೇಡ್‌, ಮೇಕೆ ಫಾರ್ಮ್‌ ಸೇರಿ ಎಲ್ಲೆಡೆ ಶೋಧ ನಡೆಸಿತು.

ಸರ್ಕಾರಿ ಸಂಸ್ಥೆಯಲ್ಲಿ ಮುಖ್ಯ ಇಂಜಿನಿಯರ್ ಆಗಿದ್ದ ರವೀಂದ್ರಪ್ಪ, ನಿವೃತ್ತಿ ಬಳಿಕ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ನಂಜಾವಧೂತ ಶ್ರೀಗಳಿಗೆ ಜನ್ಮದಿನದ ಶುಭಾಶಯ ಕೋರಲು ರವೀಂದ್ರಪ್ಪ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT