ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರುಗಳು 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ: ತಂದೆ ಇಬ್ಬರು ಮಕ್ಕಳು ಸೇರಿ ಐವರ ದುರ್ಮರಣ!

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ಚನ್ನಪಟ್ಟಣ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. 

ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮೃತರನ್ನು 45 ವರ್ಷದ ರವಿ ಪೂಜಾರ್​, 40 ವರ್ಷದ ಲಕ್ಷ್ಮೀ ಪೂಜಾರ್​, 15 ವರ್ಷದ ಇಂಚರಾ ಪೂಜಾರ್, 10 ವರ್ಷದ ಶಾಂತಲಾ ಪೂಜಾರ್​ ಹಾಗೂ 3 ವರ್ಷದ ಸಿರಿ ಪೂಜಾರ್ ಎಂದು ಗುರುತಿಸಲಾಗಿದೆ.

ಇನ್ನೊವಾ ಕಾರಿನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಟಿ.ನರಸೀಪುರ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!