ಬಿಎಲ್.ಸಂತೋಷ್ 
ರಾಜ್ಯ

ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ: ಶೆಟ್ಟರ್ ಆರೋಪಕ್ಕೆ ಬಿ.ಎಲ್.ಸಂತೋಷ್

ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಜಗದೀಶ್ ಶೆಟ್ಟರ್ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು: ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಜಗದೀಶ್ ಶೆಟ್ಟರ್ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯಲ್ಲಿ ಹಲವು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ. ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ. ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.

ಈ ಹಿಂದೆ ಹೇಳಿಕೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಲ್ಲದೇ, ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ಮತ್ತು ಚೀನಾ 'ಸ್ನೇಹಿತರಾಗಿರುವುದೇ' ಸರಿಯಾದ ಆಯ್ಕೆ: ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

'HAL ನಿರ್ಮಿತ ತೇಜಸ್ ಮಾರ್ಕ್-1ಎ ಫೈಟರ್ ಜೆಟ್‌ ಗಳು ಹಸ್ತಾಂತರಕ್ಕೆ ಸಿದ್ಧ': ರಕ್ಷಣಾ ಕಾರ್ಯದರ್ಶಿ

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಬಳಸುತ್ತಿದೆ: ಆರ್ ಅಶೋಕ್

Dharmasthala Case: NIA ತನಿಖೆ ಅಗತ್ಯವಿಲ್ಲ, SITಗೆ ಸ್ವಾತಂತ್ರ್ಯ ನೀಡಲಾಗಿದೆ; ಸಿಎಂ ಸಿದ್ದರಾಮಯ್ಯ

SCROLL FOR NEXT