ರಂದೀಪ್ ಸುರ್ಜೇವಾಲಾ. 
ರಾಜ್ಯ

ನೆಹರೂ ಓಲೆಕಾರ್‌ ಹೇಳಿದ್ದನ್ನೇ ಸಿದ್ದರಾಮಯ್ಯ ಹೇಳಿದ್ದಾರೆ: ಪಕ್ಷದ ನಾಯಕನ ಸಮರ್ಥಿಸಿಕೊಂಡ ಸುರ್ಜೇವಾಲಾ

ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತು ಬಿಜೆಪಿ ಮಾಜಿ ಶಾಸಕ ನೆಹರೂ ಓಲೆಕಾರ್‌ ಹೇಳಿದ ಮಾತನ್ನೇ ಮಾಜಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪಕ್ಷದ ನಾಯಕನನ್ನು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಅವರು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತು ಬಿಜೆಪಿ ಮಾಜಿ ಶಾಸಕ ನೆಹರೂ ಓಲೆಕಾರ್‌ ಹೇಳಿದ ಮಾತನ್ನೇ ಮಾಜಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪಕ್ಷದ ನಾಯಕನನ್ನು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಅವರು ಸಮರ್ಥಿಸಿಕೊಂಡಿದ್ದಾರೆ.

ಲಿಂಗಾಯತ ಸಿಎಂಗಳು ರಾಜ್ಯ ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಸ್. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಎಲ್ಲರೂ ಸಾಧನೆ ಮಾಡಿದ್ದವರು. ಬಿಜೆಪಿ ಶಾಸಕ ನೆಹರೂ ಓಲೆಕಾರ್‌ ಹೇಳಿದ್ದನ್ನು ಸಿದ್ದರಾಮಯ್ಯ ಹೇಳಿದ್ದಾರೆ. ಬೊಮ್ಮಾಯಿ ಸರ್ಕಾರ ಶೇ.40 ಕಮಿಷನ್ ಸರ್ಕಾರ ಎಂದು ಓಲೇಕರ್ ಹೇಳಿದ್ದರು, ಅದನ್ನೇ ಅವರೂ ಹೇಳಿದ್ದಾರೆಂದು ಹೇಳಿದರು.

ಬೊಮ್ಮಾಯಿ ಅವರೇ ನೀವು ವೀರೇಂದ್ರ ಪಾಟೀಲ್, ಎಸ್. ನಿಜಲಿಂಗಪ್ಪ ಅವರಿಂದ ಶೇ.1 ಪಾಠವನ್ನಾದರೂ ಕಲಿಯಿರಿ. ಬೊಮ್ಮಾಯಿ ಸರ್ಕಾರ ರಾಜ್ಯಕ್ಕೆ ಕೆಟ್ಟ ಹೆಸರು ತಂದಿದೆ. ಅವರದ್ದೇ ನಾಯಕರಾದ ಬಿ. ಎಸ್.ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದ್ದಾರೆಂದರು.

ಹಿರಿಯ ನಾಯಕರಾದ ಬಿ. ಎಸ್. ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಕೆಳಗೆ ಕೆಲಸ ಮಾಡುವ ಹಾಗೆ ಮಾಡಿದ್ದಾರೆ. ಮರ್ಯಾದೆ ನೀಡದೆ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಅವರನ್ನ ಪಕ್ಷದಿಂದ ಹೊರಗೆ ಹಾಕಿದ್ದಾರೆ. ಸವದಿ ಡಿಸಿಎಂ ಆಗಿದ್ದವರು, ಲಿಂಗಾಯತ ಸಮುದಾಯದವರನ್ನು ನಾವಲ್ಲ ಹೊರಹಾಕಿದ್ದು. ಲಿಂಗಾಯತ ಸಿಎಂ ಆಗಿದ್ದ ಶೆಟ್ಟರ್ ರನ್ನು ಹೊರಹಾಕಿದ್ದು ನಾವಲ್ಲ. ಲಿಂಗಾಯತ ಮಾಜಿ ಸಿಎಂ, ಡಿಸಿಎಂಗೆ ಅವಮಾನ ಮಾಡಿದ್ದು ನಾವಲ್ಲ. ಬಿಜೆಪಿ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT