ಅಮಿತ್ ಶಾ 
ರಾಜ್ಯ

ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಪ್ರಾರ್ಥನೆ ಸಲ್ಲಿಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಇಂದಿನಿಂದ ಅಮಿತ್ ಶಾ ಅವರು ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಆರಂಭಿಸಿದ್ದಾರೆ. ನಂತರ ಹಾಸನದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿರುವ ದಕ್ಷಿಣದ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ, ಸತತ ಎರಡನೇ ಅವಧಿಗೆ ಚುನಾವಣಾ ಪ್ರಚಾರಕ್ಕಾಗಿ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಇಂದಿನಿಂದ ಮೂರು ದಿನಗಳ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಸಿಡ್ಲಘಟ್ಟದಲ್ಲಿ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಏಪ್ರಿಲ್ 29 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುವುದರೊಂದಿಗೆ ಪಕ್ಷದ ಬೃಹತ್ ಚುನಾವಣಾ ಪ್ರಚಾರಕ್ಕೆ ಚಾಲನೆ ದೊರೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT