ಎಸ್ಯುವಿ ಕಾರು ಡಿಕ್ಕಿ: ಸೈಕಲ್ ಸವಾರ ಸಾವು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಟಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಬೆಂಗಳೂರು: ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಟಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ನಾಗರಾಜ್ (47) ಎಂದು ಗುರುತಿಸಲಾಗಿದ್ದು, ಯಲಂಕದ ಬೇಗೂರು ನಿವಾಸಿಯಾಗಿದ್ದಾರೆಂದು ತಿಳಿದುಬಂದಿದೆ.
ನಿನ್ನೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ನಾಗರಾಜ್ ಅವರು ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಏರ್ಪೋರ್ಟ್ ರಸ್ತೆ ಕಡೆಗೆ ಸೈಕಲ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಅವರ ಬೈಸಿಕಲ್ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ನಾಗರಾಜ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಧ್ಯಾಹ್ನದ ವೇಳೆಗೆ ಅವರು ಮೃತಪಟ್ಟಿದ್ದಾರೆಂದು ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಚಾಲಕನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.