ಎಸ್. ಗಿರೀಶ್ ಮತ್ತು ರಿಷ್ಯಂತ್ 
ರಾಜ್ಯ

ವಿಧಾನಸಭೆ ಚುನಾವಣಾ ಅಖಾಡದಲ್ಲಿ ಮಾವಂದಿರು: ಇಬ್ಬರು ಐಪಿಎಸ್ ಅಳಿಯಂದಿರಿಗೆ 'ವರ್ಗಾವಣೆ ಭಾಗ್ಯ'!

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್‌ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆಗೂ ಮುನ್ನ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್‌ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ.

ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಎಸ್ಪಿ ಮತ್ತು ಪ್ರಾಂಶುಪಾಲರಾದ ಡಾ.ಅರುಣ್ ಕೆ ಅವರನ್ನು ದಾವಣಗೆರೆಯ ಎಸ್ಪಿಯಾಗಿ ನಿಯೋಜಿಸಲಾಗಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಭಾನುವಾರ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಧರ್ಮೇಂದ್ರಕುಮಾರ್ ಮೀನಾ ಅವರನ್ನು ವರ್ಗಾಯಿಸಲಾಗಿದೆ. ದಾವಣಗೆರೆ ಎಸ್ಪಿ ಸಿ.ಬಿ. ರಿಷ್ಯಂತ್ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಡಾ. ಕೆ. ಅರುಣ್ ಅವರನ್ನು ವರ್ಗಾವಣೆ ಮಾಡಲಾಗಿದೆ.

‘ಗಿರೀಶ್ ಅವರ ಮಾವ ಕೆ.ಎನ್‌. ರಾಜಣ್ಣ, ಮಧುಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ರಿಷ್ಯಂತ್ ಅವರ ಮಾವ ಎಸ್. ಮುನಿರತ್ನ, ಬೆಂಗಳೂರು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಅಧಿಕಾರಿಗಳ ನೇರ ಸಂಬಂಧಿಗಳು ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT