ರಾಜ್ಯ

ತೀವ್ರವಾಗಿ ಬಾಧಿಸುತ್ತಿದ್ದ ಅನಾರೋಗ್ಯ: ಬೇಸತ್ತ ವೈದ್ಯ ಆತ್ಮಹತ್ಯೆಗೆ ಶರಣು

Manjula VN

ಬೆಂಗಳೂರು: ಅತೀವ್ರವಾಗಿ ಬಾಧಿಸುತ್ತಿದ್ದ ಅನಾರೋಗ್ಯದಿಂದ ಬೇಸತ್ತ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾವಲ್ ಬೈರಸಂದ್ರದಲ್ಲಿ ನಡೆದಿದೆ.

ಜಯನಗರ ಜನರಲ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯ ಎ ರೇಣುಕಾನಂದ (43) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ರೇಣುಕಾನಂದ ಅವರು ಮಕ್ಕಳ ತಜ್ಞರಾಗಿದ್ದರು ಎಂದು ತಿಳಿದುಬಂದಿದೆ. .

ಎಂದಿನಂತೆ ಭಾನುವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದು, ಮಧ್ಯಾಹ್ನ ತಮ್ಮ ಕೊಠಡಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಎಸ್‌ಯುವಿ ಕಾರು ಡಿಕ್ಕಿ: ಸೈಕಲ್ ಸವಾರ ಸಾವು
 
ವೈದ್ಯ ಹುಟ್ಟಿನಿಂದಲೇ ದೈಹಿಕ ಅಂಗವೈಕಲ್ಯ ಹೊಂದಿದ್ದು, ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕಾವಲ್ ಬೈರಸಂದ್ರದಲ್ಲಿ ವಾಸವಾಗಿದ್ದರು. ಸಾವಿಗೂ ಮುನ್ನ ವೈದ್ಯ ಡೆತ್ ನೋಟ್ ವೊಂದನ್ನು ಬರೆದಿಟ್ಟಿದ್ದಾರೆ.

ಅನಾರೋಗ್ಯ ಸಮಸ್ಯೆಗಳಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದು, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT