ಕೇಂದ್ರ ಚುನಾವಣಾ ಆಯೋಗ 
ರಾಜ್ಯ

ವಿಧಾನಸಭೆ ಚುನಾವಣೆ: ಮಕ್ಕಳನ್ನು ಬಳಸಿಕೊಂಡ ಆರೋಪ; ಸಂಘಟಕರ ವಿರುದ್ಧ ಏಳು ಎಫ್‌ಐಆರ್ ದಾಖಲು

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಇದೆ ವೇಳೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಬಳ್ಳಾರಿ , ಕೊಪ್ಪಳ ಸೇರಿದಂತೆ 7 ಜಿಲ್ಲೆಗಳಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ 7 ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಇದೆ ವೇಳೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಬಳ್ಳಾರಿ , ಕೊಪ್ಪಳ ಸೇರಿದಂತೆ 7 ಜಿಲ್ಲೆಗಳಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ 7 ಎಫ್ಐಆರ್ ದಾಖಲಿಸಿದ್ದಾರೆ.

ಹಣ ಹಂಚಿಕೆ, ರ್ಯಾಲಿಗಳಲ್ಲಿ ಮಕ್ಕಳನ್ನು ಬಳಸಿಕೊಂಡ ಕಾರಣ ಆಯೋಜಕರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಏಪ್ರಿಲ್ 18 ಮತ್ತು 19 ರಂದು ರ್ಯಾಲಿಯಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ  ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ತಿದ್ದುಪಡಿ ಕಾಯ್ದೆ ಮತ್ತು ಬಾಲಾಪರಾಧಿ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ದಾಖಲಾದ ಎಲ್ಲಾ ಎಫ್‌ಐಆರ್‌ಗಳ ಪ್ರತಿಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಬಳಿ ಇವೆ. ಅವುಗಳಲ್ಲಿ ಹೆಚ್ಚಿನವು ಮಕ್ಕಳನ್ನು ರ್ಯಾಲಿಗಳಲ್ಲಿ ಬಳಸುವುದಕ್ಕೆ ಮತ್ತು ಪಕ್ಷದ ಧ್ವಜಗಳನ್ನು ಹಿಡಿಯುವಂತೆ ಹೇಳಿದ್ದಕ್ಕೆ ಸಂಬಂಧಿಸಿದೆ.

ಮತದಾರರಿಗೆ ಹಣ ಹಂಚಲು ಮಕ್ಕಳನ್ನು ಬಳಸಿಕೊಳ್ಳಲಾಗಿದೆ, ಹೀಗಾಗಿ ಬಳ್ಳಾರಿಯ ಸಿರುಗಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಬಿಜೆಪಿಯ ದೊಡ್ಡ ಹುಲುಗಪ್ಪ ಮತ್ತು ಕೆಆರ್‌ಪಿಪಿಯ ಜಂಗಮ ತಾಲೂಕು ಅಧ್ಯಕ್ಷ ಸಿದ್ದಯ್ಯ ಸ್ವಾಮಿ ಎಂಬುವರನ್ನು ಮೊದಲ ಆರೋಪಿಗಳಾಗಿ ಹೆಸರಿಸಲಾಗಿದೆ.

ಬಳ್ಳಾರಿ ರಸ್ತೆಯ ತಾಲೂಕು ಕ್ರೀಡಾಂಗಣದಲ್ಲಿ ಮತದಾರರಿಗೆ 100 ಮತ್ತು 200 ರೂ.ಗಳನ್ನು ಹಂಚಲು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ವಿಡಿಯೋ ತುಣುಕುಗಳು ಲಭ್ಯವಾಗಿವೆ ಎಂದು ಸಿದ್ದಯ್ಯ ಸ್ವಾಮಿ ವಿರುದ್ಧದ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಕೊಪ್ಪಳದಲ್ಲಿ ವಿವಿಧ ಪಕ್ಷಗಳ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಾಮೀದ್ ಮನಿಯಾರ್ (ಕಾಂಗ್ರೆಸ್), ಮನೋಹರಗೌಡ ಹೇರೂರು (ಕೆಆರ್‌ಪಿಪಿ), ಶೇಖನಬಿಸಾಬ್ (ಜೆಡಿಎಸ್) ಮತ್ತು ಕಾಶಿನಾಥ ಚಿತ್ರಗಾರ (ಬಿಜೆಪಿ) ವಿರುದ್ಧ ಗಂಗಾವತಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದೆ.

ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ಅಕ್ಬರ್ ಪಾಷಾ ಪಲ್ಟನ್, ಮುಸ್ಲಿಂ ಕಾಂಗ್ರೆಸ್ ಪಕ್ಷ ಮತ್ತು ಇತರ ಕಾಂಗ್ರೆಸ್ ಸದಸ್ಯರ ವಿರುದ್ಧ ಪ್ರಕರಣಗಳು ದಾಖಲಾಗಿವೆ.  ನಾಮಪತ್ರ ಸಲ್ಲಿಸುವ ಮುನ್ನವೇ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರಿಗಾಗಿ ಹೇರೂರು ರ್ಯಾಲಿ ಆಯೋಜಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಡಿಸಿ ಸುಮತಿ ಟಿಎನ್‌ಐಇಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT