ಸಂಗ್ರಹ ಚಿತ್ರ 
ರಾಜ್ಯ

ಯುದ್ಧ ಪೀಡಿತ ಸುಡಾನ್‌ ನಿಂದ ರಾಜ್ಯಕ್ಕೆ ಮರಳುವವರಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಸೇವೆ!

ಯುದ್ಧಪೀಡಿತ ಸುಡಾನ್‌'ನಿಂದ ವಾಪಸ್ಸಾಗುವ ರಾಜ್ಯದ ಜನರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರ ಸ್ವಂತ ಸ್ಥಳಗಳಿಗೆ ಕಳುಹಿಸಲು ಉಚಿತ ಸೇವೆ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತಿಳಿಸಿದೆ.

ಬೆಂಗಳೂರು: ಯುದ್ಧಪೀಡಿತ ಸುಡಾನ್‌'ನಿಂದ ವಾಪಸ್ಸಾಗುವ ರಾಜ್ಯದ ಜನರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರ ಸ್ವಂತ ಸ್ಥಳಗಳಿಗೆ ಕಳುಹಿಸಲು ಉಚಿತ ಸೇವೆ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತಿಳಿಸಿದೆ.

ಸಾರಿಗೆ ನಿಗಮವು ಸ್ಥಳಾಂತರಗೊಂಡವರಿಗೆ ಅವರ ಸ್ಥಳಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಲು ಕೆಎಸ್‌ಆರ್‌ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ್ ಎಸ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.

ಈವರೆಗೂ 200 ಜನರನ್ನು ಅವರವರ ಊರುಗಳಿಗೆ ತಲುಪಿಸಲಾಗಿದ್ದು, ಸ್ಥಳಾಂತರ ಗೊಂಡವರು ದಾವಣಗೆರೆ, ಮೈಸೂರು, ಶಿವಮೊಗ್ಗ, ಚನ್ನಗಿರಿಗೆ ಸೇರಿದವರಾಗಿದ್ದಾರೆಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

ಸುಡಾನ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದವರನ್ನು ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಉಚಿತವಾಗಿ ಅವರ ಊರುಗಳಿಗೆ ಕಳುಹಿಸಲಾಗುವುದು ಎಂದು ಏಪ್ರಿಲ್ 25 ರಂದು ಸಾರಿಗೆ ನಿಗಮವು ತನ್ನ ಅಧಿಕೃತ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT