ಆಪರೇಷನ್ ಕಾವೇರಿ 
ರಾಜ್ಯ

ಆಪರೇಷನ್ ಕಾವೇರಿ: ಯುದ್ಧ ಪೀಡಿತ ಸುಡಾನ್​ನಿಂದ 362 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಆಗಮನ

ಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ. 

ಬೆಂಗಳೂರು: ಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ. 

362 ಕನ್ನಡಿಗರನ್ನು ಭಾರತೀಯ ಸೇನಾ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಈ ಪೈಕಿ 56 ಜನ ತಮಿಳಿಗರಿದ್ದಾರೆ. ಸದ್ಯ ಸ್ಕ್ರೀನಿಂಗ್​, ಕೊವಿಡ್ ಟೆಸ್ಟ್​ ಮಾಡಿ ವಿಳಾಸ ಪಡೆಯಲಾಗಿದೆ.

ಸುರಕ್ಷಿತವಾಗಿ ಸುಡಾನ್​ನಿಂದ ಕರೆತಂದಿರುವ ಕನ್ನಡಿಗರನ್ನು ಸ್ವಾಗತಿಸಲು ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಣದೀಪ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. 

ಸ್ವಗ್ರಾಮಗಳಿಗೆ ತೆರಳಲು ಕನ್ನಡಿಗರಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಏರ್ಪೋಟ್​ನಿಂದ ಅವರು ತಮ್ಮ ಊರುಗಳಿಗೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮೈಸೂರು ಸೇರಿದಂತೆ ಹಲವಡೆಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT