ಗುರುವಾರ ಬೆಂಗಳೂರಿನ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಅಧಿಕಾರಿಗಳು ವಾಹನ ತಪಾಸಣೆ ನಡೆಸಿದರು. 
ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ: 81 ಆರ್ಥಿಕ ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ, ಅಕ್ರಮ ತಡೆಗೆ ನಗರದಲ್ಲಿ ಮೊಬೈಲ್ ಸ್ಕ್ವಾಡ್ ನಿಯೋಜನೆ

ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 81 ಆರ್ಥಿಕ ಸೂಕ್ಷ್ಮ ಪ್ರದೇಶಗಳನ್ನು ಗುರ್ತಿಸಲಾಗಿದ್ದು, ಈ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ.

ಬೆಂಗಳೂರು: ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 81 ಆರ್ಥಿಕ ಸೂಕ್ಷ್ಮ ಪ್ರದೇಶಗಳನ್ನು ಗುರ್ತಿಸಲಾಗಿದ್ದು, ಈ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ.

ಈ ಪೈಕಿ ಬೆಂಗಳೂರು ವ್ಯಾಪ್ತಿಯಲ್ಲಿ 52 ಪ್ರದೇಶಗಳನ್ನು ಗುರ್ತಿಸಲಾಗಿದ್ದು, ಈ ಪ್ರದೇಶಗಳಲ್ಲಿ ತೀವ್ರ ಹೆಚ್ಚಿನ ಸಿಬ್ಬಂದಿಗಳ ನಿಯೋಜಿಸಿ ತಪಾಸಣೆಗಳನ್ನು ತೀವ್ರಗೊಳಿಸಲಾಗಿದೆ.

ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಅತೀ ಹೆಚ್ಚು ಹಣ, ಉಡುಗೊರೆಗಳನ್ನು ವಶಕ್ಕೆ ಪಡೆಯಲಾಗಿದ್ದು, ಹೀಗಾಗಿ ಇವುಗಳನ್ನು ಆರ್ಥಿಕ ಸೂಕ್ಷ್ಮ ಪ್ರದೇಶಗಳೆಂದು ಗುರ್ತಿಸಲಾಗಿದೆ.

ಬೆಂಗಳೂರಿನ 28 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ಆರ್ಥಿಕವಾಗಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದ್ದು, ಈ ಪ್ರದೇಶಗಳಲ್ಲಿ ಚುನಾವಣಾಧಿಕಾರಿಗಳು ಮತ್ತು ನಿಯೋಜಿತ ಏಜೆನ್ಸಿಗಳು ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.

ಇದೇ ಮೊದಲ ಬಾರಿಗೆ ನಗರದಲ್ಲಿ ಮೊಬೈಲ್ ಸ್ಕ್ವಾಡ್ ಗಳನ್ನೂ ನಿಯೋಜಿಸಲಾಗಿದ್ದು, ಈ ಸ್ಕ್ವಾಡ್ ನಲ್ಲಿ 4-5 ಮಂದಿ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಾರೆ. ಅದರಲ್ಲಿ ಒಬ್ಬರು ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ಹೊಂದಿರುವ ಅಧಿಕಾರಿಯಾಗಿರಲಿದ್ದಾರೆ.

200 ಫ್ಲೈಯಿಂಗ್ ಸ್ಕ್ವಾಡ್‌ಗಳು, 130 ಚೆಕ್‌ಪೋಸ್ಟ್ ತಂಡಗಳನ್ನು ಹೊರತುಪಡಿಸಿ, ಜಿಎಸ್‌ಟಿ, ಕೇಂದ್ರೀಯ ಅಬಕಾರಿ, ಪೊಲೀಸ್, ಸಾರಿಗೆ, ಆದಾಯ ತೆರಿಗೆ ಮತ್ತು ಇತರ ವಿಶೇಷ ತಂಡಗಳು ಈಗಾಗಲೇ ಅಕ್ರಮ ಚಟುವಟಿಕಗಳ ಮೇಲೆ ನಿಗಾ ಇರಿಸಿದ್ದಾರೆ.

ರಾಜ್ಯದಲ್ಲಿ ಹಣ-ಉಡುಗೊರೆ ನೀಡಿ ಮತದಾರರ ಒಲಿಸಿಕೊಳ್ಳುವ ಪ್ರಯತ್ನಗಳು ಭಾರೀ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದನ್ನು ಗಮನಿಸಿರುವ ಮುಖ್ಯ ಚುನಾವಣಾಧಿಕಾರಿಗಳು, ಜಾಗೃತೆ ವಹಿಸಲು ಕಾರ್ಯತಂತ್ರಗಳನ್ನು ಬದಲಿಸುತ್ತಿದ್ದಾರೆ.

ಬೆಂಗಳೂರು ಹೊರವಲಯದಲ್ಲಿ ಕೇವಲ ಏಳು ಕ್ಷೇತ್ರಗಳಿದ್ದರೂ, ಕಳೆದ ಚುನಾವಣೆಗೆ ಹೋಲಿಸಿದರೆ ಈ ಪ್ರದೇಶಗಳಲ್ಲಿ ದಾಳಿಗಳು ಶೇ.400ರಷ್ಟು ಹೆಚ್ಚಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಮ್ಮ ಸಿಬ್ಬಂದಿಗಳು ಸದಾಕಾಲ ಸಂಚರಿಸಿ ಅಕ್ರಮಗಳ ಮೇಲೆ ನಿಗಾವಹಿಸಿದೆ. ಇದೀಗ ಸಿಬ್ಬಂದಿಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ವಾಹನಗಳನ್ನು ತೀವ್ರ ತಪಾಸಣೆ ನಡೆಸಲಾಗುತ್ತಿದೆ. ರಾತ್ರಿ ವೇಳೆಗೆ ಮಾತ್ರವೇ ನಮ್ಮ ತಪಾಸಣೆ ಸೀಮಿತವಾಗಿಲ್ಲ. ಹಗಲಿನಲ್ಲೂ ತಪಾಸಣೆಗಳನ್ನು ನಡೆಸಲಾಗುತ್ತಿದೆ. ಬ್ಯಾಂಕ್ ವಹಿವಾಟುಗಳ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT