ಸಿಎಂ ಸಿದ್ದರಾಮಯ್ಯ 
ರಾಜ್ಯ

ಉಡುಪಿ: ಕಡಲ್ಕೊರೆತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ!

ಉಡುಪಿಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕಡಲ್ಕೊರೆತದಿಂದ ಹಾನಿಗೊಳಗಾದ ಕರಾವಳಿ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದರು.

ಮಂಗಳೂರು: ಉಡುಪಿಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕಡಲ್ಕೊರೆತದಿಂದ ಹಾನಿಗೊಳಗಾದ ಕರಾವಳಿ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದರು.

ಪಡುಬಿದ್ರಿ ಬೀಚ್ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿದ್ದು ಅಲ್ಲಿಗೆ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಜಿಲ್ಲೆಯ 98 ಕಿ.ಮೀ ಕರಾವಳಿಯ ರಕ್ಷಣೆಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಇತ್ತೀಚೆಗೆ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಂದಾಜು 35 ಕೋಟಿ ರೂಪಾಯಿ ನಷ್ಟವಾಗಿದ್ದು, ಅಗತ್ಯ ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಲಾಗುವುದು ಎಂದರು.

ಈ ವೇಳೆ ಉಡುಪಿ ಕಾಲೇಜಿನಲ್ಲಿ ವಾಶ್ ರೂಂ ವಿಡಿಯೋ ಪ್ರಕರಣದ ಕುರಿತು ಮಾತನಾಡಿದ ಅವರು, ಪ್ರಕರಣ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಮಧ್ಯೆ ನಾನು ಹೇಳಿಕೆ ನೀಡುವುದು ಸರಿಯಲ್ಲ. ತನಿಖೆ ಮುಗಿಯಲಿ ಎಂದರು. ಇನ್ನು ಈ ಸಂಬಂಧ ಕಾಲೇಜು ಆಡಳಿತ ಮಂಡಳಿಯಾಗಲಿ, ಸಂತ್ರಸ್ತ ಬಾಲಕಿಯಾಗಲಿ ಪ್ರಕರಣ ದಾಖಲಿಸಿಲ್ಲ ಎಂದರು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಜಿಹಾದಿ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್