ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ; ಡ್ಯಾನ್ಸ್ ಮಾಸ್ಟರ್ ಸೇರಿ ಮೂವರ ಬಂಧನ

ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನೃತ್ಯ ಶಿಕ್ಷಕ ಸೇರಿದಂತೆ ಮೂವರನ್ನು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನೃತ್ಯ ಶಿಕ್ಷಕ ಸೇರಿದಂತೆ ಮೂವರನ್ನು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಖಾಸಗಿ ಶಾಲೆಯ ನೃತ್ಯ ಶಿಕ್ಷಕ ಆಂಡಿ ಜಾರ್ಜ್, ಸಂತೋಷ್ ಮತ್ತು ಶಶಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆಂಡಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಸಾಮಾಜಿಕ ಮಾಧ್ಯಮದ ಮೂಲಕ ಸ್ನೇಹ ಬೆಳೆಸಿದ್ದಾನೆ.

ನಂತರ ಆಕೆಯ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿ ನಂತರ ಬೆದರಿಕೆ ಹಾಕಲು ಪ್ರಾರಂಭಿಸಿದ್ದಾನೆ. ಆರೋಪಿಯ ಬಗ್ಗೆ ಇದ್ದ ಅನುಮಾನ ಮತ್ತು ಭಯದಿಂದ  ವಿದ್ಯಾರ್ಥಿನಿ ಆತನಿಂದ ದೂರವಾಗಿದ್ದಳು. ಬಳಿಕ ತನ್ನ ಬಳಿಯಿದ್ದ ಖಾಸಗಿ ಚಿತ್ರಗಳನ್ನು ಹಂಚಿಕೊಳ್ಳುವುದಾಗಿ ಬ್ಲ್ಯಾಕ್ ಮೇಲ್ ಮಾಡಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಅತ್ಯಾಚಾರ ಕೃತ್ಯವನ್ನು ರೆಕಾರ್ಡ್ ಮಾಡಿಕೊಂಡಿದ್ದ ಆತ, ಈ ದೃಶ್ಯಾವಳಿಯನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡುವುದನ್ನು ಮುಂದುವರೆಸಿದ್ದ ಮತ್ತು ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ.

ಆರೋಪಿ ತನ್ನ ಸ್ನೇಹಿತರನ್ನು ಮನೆಗೆ ಕರೆಸಿಕೊಂಡು ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಯು ಆಕೆಯ ಚಿತ್ರಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ. ಸಂತ್ರಸ್ತೆ  ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಮೊಬೈಲ್ ಫೋನ್ ಮತ್ತು ಪೆನ್ ಡ್ರೈವ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಅದರಲ್ಲೂ ಪ್ರಮುಖ ಆರೋಪಿ ಆಂಡಿ ಇದೇ ರೀತಿಯ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT